ಆತ್ಮಹತ್ಯೆ (ಪ್ರಾತಿನಿಧಿಕ ಚಿತ್ರ)
ಉಳ್ಳಾಲ: ಕೋಟೆಕಾರು ಪ.ಪಂ ವ್ಯಾಪ್ತಿಯ ಮಾಡೂರು ಸಮೀಪದ ಬಾಡಿಗೆ ಮನೆಯಲ್ಲಿದ್ದ ವಾಸವಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹರೀಶ್ ಆಚಾರ್ಯ (35) ಆತ್ಮಹತ್ಯೆ ಮಾಡಿಕೊಂಡವರು. ಮರ ಹಾಗೂ ಚಿನ್ನದ ಕೆಲಸ ನಿರ್ವಹಿಸುತ್ತಿದ್ದ ಅವರು ಮನೆಯಲ್ಲಿ ಒಂಟಿಯಾಗಿದ್ದರು. ಅವಿವಾಹಿತರಾಗಿರುವ ಇವರು ಮೂರು ವರ್ಷಗಳಿಂದ ಮಾಡೂರು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಸೋಮವಾರ ಬೆಳಿಗ್ಗೆ ನೇಣುಹಾಕಿಕೊಂಡ ಸ್ಥಿತಿಯಲ್ಲಿ ಹರೀಶ್ ಪತ್ತೆಯಾಗಿದ್ದಾರೆ. ಅವರ ಸಂಬಂಧಿಕರು ಮಡ್ಯಾರು ಸಮೀಪ ವಾಸಿಸುತ್ತಿದ್ದರು. ಉಳ್ಳಾಲ ಪೊಲೀಸರು ಪರಿಶೀಲನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.