ADVERTISEMENT

ಕೋವಿಡ್-19| ಕಾಸರಗೋಡಿನಲ್ಲಿ ಹೊಸ ಪ್ರಕರಣವಿಲ್ಲ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2020, 15:11 IST
Last Updated 26 ಏಪ್ರಿಲ್ 2020, 15:11 IST

ಮಂಗಳೂರು: ಕಾಸರಗೋಡಿನಲ್ಲಿ ಭಾನುವಾರವೂ ಕೋವಿಡ್‌–19 ಯಾವುದೇ ಹೊಸ ಪ್ರಕರಣಗಳು ಪತ್ತೆಯಾಗಿಲ್ಲ. 2 ದಿನಗಳಿಂದ ಜಿಲ್ಲೆಯ ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

ಭಾನುವಾರ ಸೋಂಕಿತ ವ್ಯಕ್ತಿಯೊಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಕಾಸರಗೋಡು ಜಿಲ್ಲೆಯಲ್ಲಿ ಈವರೆಗೆ 175 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಈ ಪೈಕಿ 160 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಹಾಗಾಗಿ ಜಿಲ್ಲೆಯಲ್ಲಿ ಒಟ್ಟಾರೆ ಶೇ 91.4 ರಷ್ಟು ಸೋಂಕಿತರು ಗುಣಮುಖರಾದಂತಾಗಿದೆ.

ಪ್ರಸ್ತುತ ಆಸ್ಪತ್ರೆಯಲ್ಲಿ 15 ಮಂದಿ ಮಾತ್ರ ಚಿಕಿತ್ಸೆ ಪಡೆಯುತ್ತಿದ್ದು, ನಿಗಾದಲ್ಲಿ ಇರುವವರ ಸಂಖ್ಯೆ ಗಣನೀಯವಾಗಿ ಕುಸಿದಿದೆ. ಐಸೋಲೇಷನ್ ವಾರ್ಡ್‌ಗಳಲ್ಲಿ 32 ಮಂದಿ ಮಾತ್ರ ಇದ್ದಾರೆ. ಮನೆಗಳಲ್ಲಿ 2,165 ಮಂದಿ ವೈದ್ಯಕೀಯ ನಿಗಾದಲ್ಲಿದ್ದಾರೆ. ಇನ್ನೂ 370 ಮಂದಿಯ ಪರೀಕ್ಷೆಯ ವರದಿ ಬರಬೇಕಾಗಿದ್ದು, ಎರಡು ದಿನಗಳಿಂದ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.