ADVERTISEMENT

ಸುರತ್ಕಲ್: ಆಟಿದ ಪೊರ್ಲು, ಅಭಿನಂದನಾ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 28 ಜುಲೈ 2024, 13:02 IST
Last Updated 28 ಜುಲೈ 2024, 13:02 IST
<div class="paragraphs"><p>ಸುರತ್ಕಲ್ ಬಂಟರ ಸಂಘದ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು</p></div>

ಸುರತ್ಕಲ್ ಬಂಟರ ಸಂಘದ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು

   

ಸುರತ್ಕಲ್: ಸುರತ್ಕಲ್ ಬಂಟರ ಸಂಘ, ಮಹಿಳಾ ವೇದಿಕೆ ಸಹಯೋಗದಲ್ಲಿ ಆಟಿದ ಪೊರ್ಲು ಮತ್ತು ಅಭಿನಂದನಾ ಕಾರ್ಯಕ್ರಮ ಸುರತ್ಕಲ್ ಬಂಟರ ಭವನದಲ್ಲಿ ಭಾನುವಾರ ನಡೆಯಿತು.

ಕಾರ್ಯಕ್ರಮವನ್ನು ಸುರತ್ಕಲ್ ಬಂಟರ ಸಂಘದ ಕಟ್ಟಡ ಸಮಿತಿ ಅಧ್ಯಕ್ಷ ಕರುಣಾಕರ ಎಂ.ಶೆಟ್ಟಿ ಮಧ್ಯಗುತ್ತು ಉದ್ಘಾಟಿಸಿದರು.

ADVERTISEMENT

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಡಾ.ಮಮತಾ ಪಿ.ಶೆಟ್ಟಿ ಮಾತನಾಡಿದರು.

ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು ಅಧ್ಯಕ್ಷತೆ ವಹಿಸಿದ್ದರು.

ಸಾಧಕರಾದ ವಿಶ್ವನಾಥ ಶೆಟ್ಟಿ ಕಟ್ಲ ಬಾಳಿಕೆ (ಕೃಷಿ), ಉಮೇಶ್ ದೇವಾಡಿಗ (ಸಮಾಜ ಸೇವೆ), ಅಣ್ಣು ಪಡ್ರೆ (ಪೌರ ಕಾರ್ಮಿಕ), ಸೇಸಮ್ಮ ಸುಭಾಷಿತ ನಗರ (ನಾಟಿ ವೈದ್ಯೆ) ಅವರನ್ನು ಸನ್ಮಾನಿಸಲಾಯಿತು.

ಪ್ರಮುಖರಾದ ಚಂದ್ರಿಕಾ ಹರೀಶ್ ಶೆಟ್ಟಿ, ಡಾ.ಸಚ್ಚಿದಾನಂದ ರೈ, ಪ್ರಸಾದ್ ಕುಮಾರ್ ಶೆಟ್ಟಿ, ಭವ್ಯಾ ಎ.ಶೆಟ್ಟಿ, ಸರೋಜಾ ತಾರಾನಾಥ್ ಶೆಟ್ಟಿ, ಜ್ಯೋತಿ ಪ್ರವೀಣ್ ಶೆಟ್ಟಿ, ಪುಷ್ಪರಾಜ್ ಶೆಟ್ಟಿ ಕುಡುಂಬೂರು, ಅವಿನಾಶ್ ಶೆಟ್ಟಿ, ಸುಧಾಕರ್ ಎಸ್.ಪೂಂಜ ಭಾಗವಹಿಸಿದ್ದರು.

ಲೀಲಾಧರ ಶೆಟ್ಟಿ ಸ್ವಾಗತಿಸಿದರು. ಸುಧಾ ಚಂದ್ರಶೇಖರ ಶೆಟ್ಟಿ, ಸವಿತಾ ಭವಾನಿಶಂಕರ್ ಶೆಟ್ಟಿ, ಅನೂಪ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಆಶಾ ಶೆಟ್ಟಿ ಶಿಬರೂರು ಪ್ರಾರ್ಥಿಸಿದರು‌. ಮಹಿಳಾ ವೇದಿಕೆಯ ಕಾರ್ಯದರ್ಶಿ ಸುಜಾತ ಶೆಟ್ಟಿ ಕೃಷ್ಣಾಪುರ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.