ADVERTISEMENT

ಆಸ್ಕರ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ: ಆರೋಗ್ಯ ಸ್ಥಿರ

​ಪ್ರಜಾವಾಣಿ ವಾರ್ತೆ
Published 27 ಜುಲೈ 2021, 19:31 IST
Last Updated 27 ಜುಲೈ 2021, 19:31 IST
ಆಸ್ಕರ್‌ ಫರ್ನಾಂಡಿಸ್‌
ಆಸ್ಕರ್‌ ಫರ್ನಾಂಡಿಸ್‌   

ಮಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡ, ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ನಗರದ ಯೇನೆಪೋಯ ಆಸ್ಪತ್ರೆಯಲ್ಲಿ ಸೋಮವಾರ ತಡರಾತ್ರಿಯಿಂದ ಮಂಗಳವಾರ ಬೆಳಗಿನವರೆಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಡಾ.ದಿವಾಕರ್‌ ರಾವ್‌ ಹಾಗೂ ಡಾ. ಸುನಿಲ್ ಶೆಟ್ಟಿ ನೇತೃತ್ವದ ವೈದ್ಯರ ತಂಡ ಶಸ್ತ್ರಚಿಕಿತ್ಸೆ ಮೂಲಕ ಮಿದುಳಿನಲ್ಲಿನ ರಕ್ತ ಹೆಪ್ಪುಗಟ್ಟಿರುವುದರನ್ನು ತೆಗೆದು ಹಾಕಿದೆ. ಆಸ್ಕರ್‌ ಫರ್ನಾಂಡಿಸ್‌ ಅವರಿಗೆ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ. ಅವರಿಗೆ ಶೀಘ್ರದಲ್ಲಿಯೇ ಪ್ರಜ್ಞೆ ಬರುವ ಸಾಧ್ಯತೆ ಇದೆ ಎಂದು ಹೇಳಿವೆ.

ಜುಲೈ 18 ರಂದು ನಗರದ ಅತ್ತಾವರದ ಫ್ಲ್ಯಾಟ್‌ನಲ್ಲಿ ಯೋಗ ಮಾಡುವ ವೇಳೆ ಜಾರಿ ಬಿದ್ದಿದ್ದ ಆಸ್ಕರ್‌ ಫರ್ನಾಂಡಿಸ್‌ ಅವರ ತಲೆಗೆ ಪೆಟ್ಟಾಗಿತ್ತು. ಡಯಾಲಿಸಿಸ್‌ಗಾಗಿ ಯೇನೆಪೋಯ ಆಸ್ಪತ್ರೆಗೆ ಬಂದಾಗ, ಮಿದುಳಿನಲ್ಲಿ ರಕ್ತಸ್ರಾವವಾಗಿ, ಹೆಪ್ಪುಗಟ್ಟಿರುವುದು ಪತ್ತೆಯಾಗಿತ್ತು. ಜು.19 ರಿಂದ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.