ಬಂಟ್ವಾಳ: ಇಲ್ಲಿನ ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದ 10ನೇ ತರಗತಿ ವಿದ್ಯಾರ್ಥಿನಿ ಅನರ್ಘ್ಯ ಎ.ಆರ್. ಮಂಗಳೂರಿನಲ್ಲಿ ನಡೆದ ಜಿಲ್ಲಾಮಟ್ಟದ ಈಜು ಸ್ಪರ್ಧೆಯ 17 ವಯಸ್ಸಿನ ಬಾಲಕಿಯರ ವಿಭಾಗದಲ್ಲಿ 200 ಮೀಟರ್ ಬ್ಯಾಕ್ ಸ್ಟ್ರೋಕ್ ಸಹಿತ 200 ಮೀ. ಮತ್ತು 400 ಮೀ. ವೈಯಕ್ತಿಕ ವಿಭಾಗದಲ್ಲಿ ಚಿನ್ನದ ಪದಕ ಗೆದ್ದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ರೇಷ್ಮೆ ಇಲಾಖೆ ನಿವೃತ್ತ ಇನ್‌ಸ್ಪೆಕ್ಟರ್ ಬಿ.ಕೆ.ನಾಯಕ್ ಅವರ ಶಿಷ್ಯೆಯಾಗಿದ್ದು, ಮಂಗಳೂರಿನ ಸೇಂಟ್ ಅಲೋಶಿಯಸ್ ಈಜುಕೊಳದ ಮುಖ್ಯ ತರಬೇತುದಾರರಾದ ಲೋಕರಾಜ್ ವಿಟ್ಲ, ವಿನೋದ್ ಕಾರವಾರ ಅವರು ತರಬೇತಿ ನೀಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.