ಬಂಧನ
(ಪ್ರಾತಿನಿಧಿಕ ಚಿತ್ರ)
ಪುತ್ತೂರು: ನಗರದ ಬೊಳುವಾರಿನಲ್ಲಿ ತಲವಾರನ್ನು ಹಿಡಿದುಕೊಂಡು ಸಾರ್ವಜನಿಕರಿಗೆ ತೋರಿಸುತ್ತಾ ಬೆದರಿಕೆ ಒಡ್ಡುತ್ತಿದ್ದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಸಾರ್ವಜನಿಕರಿಂದ ಬಂದ ಮಾಹಿತಿ ಆಧರಿಸಿ ಪುತ್ತೂರು ನಗರ ಠಾಣಾ ಪೊಲೀಸರು ಸೋಮವಾರ ಮಧ್ಯಾಹ್ನ ಸ್ಥಳಕ್ಕೆ ತೆರಳಿದ್ದರು. ತಲವಾರು ಹಿಡಿದುಕೊಂಡಿದ್ದ ವ್ಯಕ್ತಿಯನ್ನು ಸಾರ್ವಜನಿಕರ ಸಹಾಯದಿಂದ ಹಿಡಿದು ವಿಚಾರಿಸಿದ್ದರು.
‘ಆರೋಪಿಯು ಹಾಸನದ ರಾಜು (45). ಪ್ರಸ್ತುತ ಬಂಟ್ವಾಳದಲ್ಲಿ ವಾಸವಾಗಿದ್ದಾನೆ ಎಂದು ಗೊತ್ತಾಗಿದೆ. ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.