ADVERTISEMENT

ಬೆಳ್ತಂಗಡಿ: ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆ

​ಪ್ರಜಾವಾಣಿ ವಾರ್ತೆ
Published 31 ಮೇ 2025, 13:13 IST
Last Updated 31 ಮೇ 2025, 13:13 IST
ಬೆಳ್ತಂಗಡಿ ತಾಲ್ಲೂಕು ಪಂಚಾಯಿತಿಯ ಸಾಮಾನ್ಯ ಸಭೆಯು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಜಯಲಕ್ಷ್ಮೀ ರಾಯಕೋಡ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು
ಬೆಳ್ತಂಗಡಿ ತಾಲ್ಲೂಕು ಪಂಚಾಯಿತಿಯ ಸಾಮಾನ್ಯ ಸಭೆಯು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಜಯಲಕ್ಷ್ಮೀ ರಾಯಕೋಡ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು   

ಬೆಳ್ತಂಗಡಿ: ತಾಲ್ಲೂಕು ಪಂಚಾಯಿತಿಯ ಸಾಮಾನ್ಯ ಸಭೆ ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ, ದಕ್ಷಿಣ ಕನ್ನಡ ಜಿಲ್ಲಾ ಪಂಚಾ‌ಯಿತಿಯ ಉಪಕಾರ್ಯದರ್ಶಿ ಜಯಲಕ್ಷ್ಮೀ ರಾಯಕೋಡ್ ಅವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಶನಿವಾರ ನಡೆಯಿತು.

ಕಳೆದ ಸಾಮಾನ್ಯ ಸಭೆಯ ನಿರ್ಣಯಗಳ ಬಗ್ಗೆ ಕೈಗೊಂಡ ಕ್ರಮಗಳನ್ನು ಪರಿಶೀಲಿಸಲಾಯಿತು.

2024-25ನೇ ಸಾಲಿನ ತಾಲ್ಲೂಕು ಪಂಚಾಯತಿಯ ಮಾಸಿಕ ಲೆಕ್ಕ ಪತ್ರಗಳಿಗೆ ಹಾಗೂ ಇತರ ಇಲಾಖೆಗಳ ವಾರ್ಷಿಕ ಲೆಕ್ಕ ಪತ್ರಗಳಿಗೆ ಅನುಮೋದನೆ ನೀಡಲಾಯಿತು. 2025-26ನೇ ಸಾಲಿನ ಲಿಂಕ್ ದಾಖಲೆ ಪ್ರಕಾರ ವಿವಿಧ ಇಲಾಖೆಗಳಿಗೆ ವಾರ್ಷಿಕವಾಗಿ ನಿಗದಿಪಡಿಸಿದ ‌ಕ್ರಿಯಾಯೋಜನೆಗಳಿಗೆ ಅನುಮೋದನೆ ನೀಡಲಾಯಿತು.

ADVERTISEMENT

ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಎನ್., ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.