ADVERTISEMENT

ಕುಕ್ಕೆಗೆ ತಮಿಳು ಚಿತ್ರ ನಿರ್ಮಾಪಕ ಅರುಣ್ ಕುಮಾರ್ ಭೇಟಿ

​ಪ್ರಜಾವಾಣಿ ವಾರ್ತೆ
Published 23 ಜುಲೈ 2021, 11:05 IST
Last Updated 23 ಜುಲೈ 2021, 11:05 IST
 ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನಿರ್ಮಾಪಕ ಅರುಣ್ ಕುಮಾರ್ ಭೇಟಿ ನೀಡಿದರು. 
 ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನಿರ್ಮಾಪಕ ಅರುಣ್ ಕುಮಾರ್ ಭೇಟಿ ನೀಡಿದರು.    

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕಾಲಿವುಡ್ ನಿರ್ಮಾಪಕ ಅರುಣ್ ಕುಮಾರ್ ದಂಪತಿ ಭೇಟಿ ನೀಡಿ ಸುಬ್ರಹ್ಮಣ್ಯ ದೇವರ ದರ್ಶನ ಪಡೆದರು.

ದೇವಳದಿಂದ ನಡೆಯುವ ಅನ್ನದಾನ ನಿಧಿಗೆ ₹ 10 ಲಕ್ಷ ಮೊತ್ತದ ಚೆಕ್‌ ಅನ್ನು ಅವರು ಹಸ್ತಾಂತರಿಸಿದರು. ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಡಾ.ನಿಂಗಯ್ಯ, ಅಧೀಕ್ಷಕ ಬಾಲಸುಬ್ರಹ್ಮಣ್ಯ ಭಟ್, ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ ಸದಸ್ಯ ಹರೀಶ್ ಇಂಜಾಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT