ಪುತ್ತೂರು: 2025ನೇ ಸಾಲಿನ ಎಸ್ಎಸ್ಎಲ್‌ಸಿ ಮತ್ತು ಪಿಯು ಪರೀಕ್ಷೆಯಲ್ಲಿ ವಿದ್ಯಾರಶ್ಮಿಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಎಸ್ಎಸ್ಎಲ್‌ಸಿಯಲ್ಲಿ ರಾಜ್ಯಮಟ್ಟದಲ್ಲಿ 8, 9 ಮತ್ತು 10ನೇ ಸ್ಥಾನ ಪಡೆಯುವಲ್ಲಿ ಎರಡೂ ಸಂಸ್ಥೆಗಳೂ ಶೇ 100 ಫಲಿತಾಂಶ ದಾಖಲಿಸುವಲ್ಲಿ ಶಿಕ್ಷಕರ ಶ್ರಮ ಮಹತ್ತರವಾಗಿದೆ. ಆ ಕಾರಣದಿಂದ ಶಿಕ್ಷಕರನ್ನು ಅಭಿನಂದಿಸಲಾಗುತ್ತಿದೆ ಎಂದು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸಹಕಾರ ರತ್ನ ಕೆ.ಸೀತಾರಾಮ ರೈ ಸವಣೂರು ಹೇಳಿದರು.
ಪುತ್ತೂರಿನ ಪ್ರಶಾಂತ್ ಮಹಲ್‌ನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬೆಳಿಗ್ಗೆ ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಸರಸ್ವತಿ ಪೂಜೆ, ಗಣಹೋಮ ನಡೆಯಿತು.
ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳು, ಆದರ್ಶ ವಿವಿಧೋದ್ದೇಶ ಸಹಕಾರ ಸಂಘ ಮತ್ತು ಪ್ರಶಾಂತ್ ಮಹಲ್ ವತಿಯಿಂದ ಸೀತಾರಾಮ ರೈ ದಂಪತಿಯನ್ನು ಗೌರವಿಸಲಾಯಿತು.
ವಿದ್ಯಾರಶ್ಮಿ ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿನ್ ಎಲ್.ಶೆಟ್ಟಿ, ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಉಪಾಧ್ಯಕ್ಷ ಸುಂದರ ರೈ, ವಿದ್ಯಾರಶ್ಮಿ ಪದವಿ ಕಾಲೇಜಿನ ಪ್ರಾಂಶುಪಾಲೆ ರಾಜಲಕ್ಷ್ಮಿ, ವಿದ್ಯಾರಶ್ಮಿ ಪಿಯು ಕಾಲೇಜಿನ ಪ್ರಾಂಶುಪಾಲೆ ಶಶಿಕಲಾ ಆಳ್ವ ಭಾಗವಹಿಸಿದ್ದರು.
ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಪ್ರಧಾನ ಕಚೇರಿ ವ್ಯವಸ್ಥಾಪಕ ಸುನಾದ್ ರಾಜ್ ಶೆಟ್ಟಿ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.