ADVERTISEMENT

ಕಲ್ಲಾಪು: ಮೀನು ಸಾಗಿಸುವ ಟೆಂಪೊ ಪಲ್ಟಿ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2023, 7:54 IST
Last Updated 5 ಫೆಬ್ರುವರಿ 2023, 7:54 IST
ವಾಹನ ಪಲ್ಟಿಯಾಗಿ ಮೀನು ಚಲ್ಲಾಪಿಲ್ಲಿಯಾಗಿರುವುದು
ವಾಹನ ಪಲ್ಟಿಯಾಗಿ ಮೀನು ಚಲ್ಲಾಪಿಲ್ಲಿಯಾಗಿರುವುದು    

ಮಂಗಳೂರು: ಮೀನು ಸಾಗಿಸುವ ಟೆಂಪೊ ಚಾಲಕನ ನಿಯಂತ್ರಣ ತಪ್ಪಿ ತೊಕ್ಕೊಟ್ಟು ಕಲ್ಲಾಪು ಎಂಬಲ್ಲಿ ಭಾನುವಾರ ರಸ್ತೆಗೆ ಉರುಳಿದೆ.

ಲಾರಿ ಚಾಲಕ ಸಾದಿಕ್ ಸ್ವಲ್ಪ ಗಾಯದಿಂದ ಪಾರಾಗಿದ್ದಾರೆ. ಮಂಗಳೂರು ಧಕ್ಕೆಯಿಂದ ಉಳ್ಳಾಲ ಫಿಷ್ ಮಿಲ್ ಗೆ ಮೀನು ಸಾಗಾಟ ನಡೆಸುತ್ತಿದ್ದ ಟೆಂಪೋ, ಚಾಲಕನ ನಿಯಂತ್ರಣ ತಪ್ಪಿ ವಾಲಿದ್ದು, ಈ ವೇಳೆ ಟಯರ್ ಸಿಡಿದು ರಸ್ತೆಗೆ ಉರುಳಿದೆ. ಘಟನೆಯಿಂದ ರಸ್ತೆ ಸಂಚಾರದಲ್ಲಿ ಅಡಚಣೆಯುಂಟಾಗಿದೆ.

ಮಂಗಳೂರು ದಕ್ಷಿಣ ಸಂಚಾರ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿದಿ ಟೆಂಪೊ ತೆರವುಗೊಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.