ADVERTISEMENT

ಮೂರುಕಜೆ: 10ನೇ ತರಗತಿ ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2026, 12:27 IST
Last Updated 23 ಫೆಬ್ರುವರಿ 2026, 12:27 IST
<div class="paragraphs"><p> ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ವಿಟ್ಲ (ದಕ್ಷಿಣ ಕನ್ನಡ): ಕೊಡಂಗಾಯಿ ಬಳಿಯ ಮೂರುಕಜೆ ಎಂಬಲ್ಲಿ ಮೈತ್ರೆಯೆ ಗುರುಕುಲ ವಿದ್ಯಾಸಂಸ್ಥೆಯ 10ನೇ ತರಗತಿಯ ವಿದ್ಯಾರ್ಥಿನಿಯ ಮೃತದೇಹ ಕೆರೆಯಲ್ಲಿ ಸೋಮವಾರ ಪತ್ತೆಯಾಗಿದೆ.

ಬೆಂಗಳೂರಿನ ವೈಗ ಲಕ್ಷ್ಮಿ ಮೃತರು. ಆಕೆ ಭಾನುವಾರದಿಂದ ನಾಪತ್ತೆಯಾಗಿದ್ದಳು. ಹುಡುಕಾಟ ನಡೆಸಿದ ವೇಳೆ ವಿದ್ಯಾಸಂಸ್ಥೆಯ ಸಮೀಪದಲ್ಲಿರುವ ಕೆರೆಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ.

ವಿಟ್ಲ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಕೆರೆಯಲ್ಲಿದ್ದ ವಿದ್ಯಾರ್ಥಿನಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.