ADVERTISEMENT

ಅತ್ಯಾಚಾರ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಬಿಹಾರದಲ್ಲಿ ಸೆರೆ

​ಪ್ರಜಾವಾಣಿ ವಾರ್ತೆ
Published 14 ಜುಲೈ 2025, 7:39 IST
Last Updated 14 ಜುಲೈ 2025, 7:39 IST
<div class="paragraphs"><p>ಬಂಧನ</p></div>

ಬಂಧನ

   

(ಪ್ರಾತಿನಿಧಿಕ ಚಿತ್ರ)

ವಿಟ್ಲ: ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣದಲ್ಲಿ 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಿಹಾರದ ಪಾಟ್ನಾ ಜಿಲ್ಲೆಯ ಬೀಟಾ ಎಂಬಲ್ಲಿ ಬಂಧಿಸಿದ್ದಾರೆ.

ADVERTISEMENT

2015ರಲ್ಲಿ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ನಡೆದ ಅತ್ಯಾಚಾರ ಪ್ರಕರಣ ಸಂಬಂಧ ಪ್ರಕರಣ ದಾಖಲಾಗಿತ್ತು.

ಬಿಹಾರದ ಪಾಟ್ನಾ ನಿವಾಸಿ ಬಬ್ಲೂ ಕುಮಾರ ಎಂಬಾತ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ಆತನನ್ನು ವಿಟ್ಲ ಪೊಲೀಸ್ ಠಾಣಾ ಪೊಲೀಸರು, ಸ್ಥಳೀಯ ಪೊಲೀಸರ ನೆರವಿನೊಂದಿಗೆ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.