ಮಂಗಳೂರು: ಮೂಡುಬಿದಿರೆಯ ಕಡಂದಲೆಯಲ್ಲಿ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಯೊಬ್ಬರು ಗುರುವಾರ ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಧನಂಜಯ್ ಪೂಜಾರಿ ಅವರು ಬುಧವಾರ ರಾತ್ರಿ ಮುಂಬೈಯಿಂದ ಬಂದು ಕಡಂದಲೆಯಲ್ಲಿ ಕ್ವಾರಂಟೈನ್‌ನಲ್ಲಿದ್ದರು. ಕೊರೊನಾದಿಂದ ಮುಂದಿನ ಜೀವನೋಪಾಯದ ಬಗ್ಗೆ ಚಿಂತಿತರಾಗಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ವೆನ್ಲಾಕ್ ಆಸ್ಪತ್ರೆಗೆ ತರಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.