ಉಜಿರೆ: ‘ಜನಸಂಖ್ಯಾ ಸ್ಫೋಟದಿಂದ ದೇಶದ ಪ್ರಗತಿ ಕುಂಠಿತವಾಗುತ್ತದೆ. ಮೂಲಸೌಕರ್ಯ ಕೊರತೆಯಾಗಿ ಇತರೆ ಗ್ರಹಗಳಿಗೆ ಹೋಗಬೇಕಾದ ಅನಿವಾರ್ಯತೆ ಒದಗಿ ಬಂದಿದೆ’ ಎಂದು ದಕ್ಷಿಣ ಕನ್ನಡ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ದೀಪಾ ಪ್ರಭು ಹೇಳಿದರು.
ಎಸ್‌ಡಿಎಂ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಳ್ತಂಗಡಿ ತಾಲ್ಲೂಕು ಪಂಚಾಯಿತಿ ಹಾಗೂ ಉಜಿರೆ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.
‘ಮಕ್ಕಳ ಜನನದ ನಡುವಿನ ಅಂತರ ಕನಿಷ್ಠ ಮೂರು ವರ್ಷಗಳಾದರೂ ಇರಬೇಕು. ಆರೋಗ್ಯವಂತ ಯುವ ಜನತೆಯಿಂದ ದೇಶದ ಸರ್ವತೋಮುಖ ಪ್ರಗತಿ ಸಾಧ್ಯವಾಗುತ್ತದೆ’ ಎಂದರು.
ಉಜಿರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾ ಕಿರಣ ಕಾರಂತ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ
ಎಸ್. ಸತೀಶ್ಚಂದ್ರ ಮಾತನಾಡಿದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸೌಜನ್ಯಾ, ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯ ಡಾ. ರಶ್ಮಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಡಾ.ಮಂಜು, ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ಎಸ್‌ಡಿಎಂ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್, ಶಿಕ್ಷಕರ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಸ್ವಾಮಿ ಇದ್ದರು.
ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ ವಿಜೇತರು: ತೇಜಸ್ ವಿ.ಎಸ್., ಸರ್ಕಾರಿ ಪದವಿಪೂರ್ವ ಕಾಲೇಜು ವೇಣೂರು (ಪ್ರಥಮ). ಧನುಷ್, ಕೆ.ಎನ್. ಮುಂಡಾಜೆ ಪದವಿಪೂರ್ವ ಕಾಲೇಜು (ದ್ವಿತೀಯ). ಫಾತಿಮತ್ ಹಿಸಾನಾ, ಸರ್ಕಾರಿ ದವಿಪೂರ್ವ ಕಾಲೇಜು ಕೊಯ್ಯೂರು.
ಬೆಳ್ತಂಗಡಿ ತಾಲ್ಲೂಕು ಮಟ್ಟದ ಪ್ರಬಂಧ ಸ್ಪರ್ಧೆ ವಿಜೇತರು: ಫಾತಿಮತ್ ಸುಮಯ್ಯ, ಸರ್ಕಾರಿ ಪದವಿಪೂರ್ವ ಕಾಲೇಜು ವೇಣೂರು (ಪ್ರಥಮ), ಕುಮಾರಿ ಸುರಕ್ಷಿತಾ, ವಾಣಿ ಪದವಿಪೂರ್ವ ಕಾಲೇಜು, ಬೆಳ್ತಂಗಡಿ (ದ್ವಿತೀಯ), ಕುಮಾರಿ ಜೆನಿತಾ ಪಿರೇರಾ, ಸರ್ಕಾರಿ ಪದವಿಪೂರ್ವ ಕಾಲೇಜು ಬೆಳ್ತಂಗಡಿ (ತೃತೀಯ)
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ ಸ್ವಾಗತಿಸಿದರು. ವಿಭಾಗ ಯೋಜನಾಧಿಕಾರಿ ಅಜೇಯ್ ನಿರೂಪಿಸಿದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.