ADVERTISEMENT

ದೇಶದಲ್ಲಿ ಪರಿವರ್ತನೆಯ ಗಾಳಿ: ನಳಿನ್ ಕುಮಾರ್ ಕಟೀಲ್ 

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2020, 8:37 IST
Last Updated 10 ನವೆಂಬರ್ 2020, 8:37 IST
ಸಂಭ್ರಮಾಚರಣೆಯಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್
ಸಂಭ್ರಮಾಚರಣೆಯಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್   

ಮಂಗಳೂರು: ದೇಶದಲ್ಲಿ ಪರಿವರ್ತನೆಯ ಗಾಳಿಯನ್ನು ಕಾಣಬಹುದು. ಎಲ್ಲೆಡೆ ನಿರೀಕ್ಷೆ ಮೀರಿ ಬಿಜೆಪಿಗೆ ಜಯ ಲಭಿಸಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ನಗರದಲ್ಲಿ ಮಂಗಳವಾರ ವಿಜಯೋತ್ಸವ ಆಚರಿಸಿ ಅವರು ಮಾತನಾಡಿದರು.

ಎಲ್ಲೆಡೆ ಬಿಜೆಪಿ ಸಾಮೂಹಿಕ ನಾಯಕತ್ವ ಕ್ಕೆ ಜಯ ಸಿಗುತ್ತಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಯಕತ್ವ ಹಾಗೂ ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಮಂತ್ರಕ್ಕೆ ಜನ ಆಶೀರ್ವಾದ ಮಾಡಿದ್ದಾರೆ.

ವಿಪಕ್ಷಗಳು ಟೀಕೆ ಮಾಡಿದರೂ, ಜನರ ಒಲವು ಬಿಜೆಪಿಯತ್ತ ಇದೆ ಎಂದರು.

ADVERTISEMENT

ಶಿರಾದಲ್ಲಿ ಪಂಚಪಾಂಡವರು ಹಾಗೂ ರಾಜರಾಜೇಶ್ವರಿ ನಗರದಲ್ಲಿ ಅಶೋಕ್ ಹಾಗೂ ಲಿಂಬಾವಳಿ ಅವರು ಜೋಡೆತ್ತು ರೀತಿಯಲ್ಲಿ ದುಡಿದು ಪಕ್ಷವನ್ನು ಗೆಲ್ಲಿಸಿದ್ದಾರೆ. ಜನ ಕಾಂಗ್ರೆಸ್ ತಿರಸ್ಕರಿಸಿದ್ದಾರೆ. ಬಂಡೆ, ಹುಲಿಯಾ ಎಲ್ಲವನ್ನೂ ಜನರು ತಿರಸ್ಕರಿಸಿದ್ದು, ಅವರು ಎಲ್ಲೆಲ್ಲಿ ಇದ್ದಾರೆ ಎಂದು ಹುಡುಕಬಹುದು ಎಂದು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.