ಮಂಗಳೂರು: ಕೋಡಿಕಲ್ ವಿವೇಕಾನಂದ ನಗರದಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಉರ್ವ ಠಾಣೆಯ ಪೊಲೀಸರು ಮೂವರನ್ನು ಬಂಧಿಸಿದ್ದು, ಅವರಿಂದ ₹4.64 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆಯ ರಂಜಿತ್ (20), ಹಾಸನ ಜಿಲ್ಲೆ ಎಂ.ಶಿರ್ವದ ಸಾಗರ್ (21) ಮತ್ತು ವೆಂಕಟೇಶ್ (21) ಬಂಧಿತರು. ಕೋಡಿಕಲ್ ವಿವೇಕಾನಂದ ನಗರದ ಮನೆಯೊಂದರಲ್ಲಿ ಜುಲೈ 6ರಂದು 80 ಗ್ರಾಂ ಚಿನ್ನಾಭರಣ ಕಳ್ಳತನ ಆದ ಬಗ್ಗೆ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕು ಗಂಗೌಡನಹಳ್ಳಿ ಎಂಬಲ್ಲಿ ಆರೋಪಿಗಳನ್ನು ವಶಕ್ಕೆ ಪಡೆದು, ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ ವಾಹನವನ್ನು ಸ್ವಾಧೀನಪಡಿಸಿಕೊಂಡಿದ್ದಾರೆ ಎಂದು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಉರ್ವ ಠಾಣೆಯ ಇನ್‌ಸ್ಪೆಕ್ಟರ್ ಭಾರತಿ, ಪಿಎಸ್‌ಐಗಳಾದ ಹರೀಶ್ ಎಚ್.ವಿ, ಅನಿತಾ ಎಚ್.ಬಿ, ಎಎಸ್‌ಐ ವಿನಯಕುಮಾರ್, ಸಿಬ್ಬಂದಿ ಪುಷ್ಟರಾಜ್, ರಾಮಚಂದ್ರ, ಸತೀಶ್ ಎಚ್.ಕೆ, ಪ್ರಮೋದ್.ಕೆ, ವೆಂಕಟೇಶ್, ಅಭಿಷೇಕ್, ಭಾಸ್ಕರ್, ಯಲ್ಲಾಲಿಂಗ, ಮಮತಾ, ಚಂದ್ರಹಾಸ್, ಶರತ್, ಮನೋಜ್ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.