ADVERTISEMENT

ಶರಣ್‌ ಪಂಪ್‌ವೆಲ್‌ಗೆ ಜೀವ ಬೆದರಿಕೆ: ಎಫ್‌ಐಆರ್‌ ದಾಖಲು

​ಪ್ರಜಾವಾಣಿ ವಾರ್ತೆ
Published 5 ಮೇ 2025, 4:53 IST
Last Updated 5 ಮೇ 2025, 4:53 IST

ಮಂಗಳೂರು: ವಿಶ್ವ ಹಿಂದೂ ಪರಿಷತ್ತಿನ ದಕ್ಷಿಣ ಪ್ರಾಂತ ಕಾರ್ಯವಾಹ ಶರಣ್ ಪಂಪ್‌ವೆಲ್‌ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಜೀವ ಬೆದರಿಕೆ ಒಡ್ಡಿರುವ ಕುರಿತು ನಗರದ ಪೂರ್ವ ಪೊಲೀಸ್ ಠಾಣೆಯಲ್ಲಿ ಭಾನುವಾರ ಎಫ್‌ಐಆರ್ ದಾಖಲಾಗಿದೆ.

‘ಕನ್ನಡ ಸುದ್ದಿವಾಹಿನಿಯೊಂದರ ಫೇಸ್‌ಬುಕ್ ಪುಟದಲ್ಲಿ ಪ್ರಸಾರವಾದ ಸುದ್ದಿಗೆ ನಕಲಿ ಖಾತೆ ಮೂಲಕ ‘ನೆಕ್ಟ್‌ ಟಾರ್ಗೆಟ್‌ ಶರಣ್‌ ಪಂಪ್‌ವೆಲ್‌. ಶರಣ್‌ ಬಿ ರೆಡಿ ಟು ಡೈ’ ಎಂದು ಉಲ್ಲೇಖಿಸಿ ಸಂದೇಶ ಹಾಕಿದ್ದಾರೆ’ಎಂದು ಶರಣ್ ಪಂಪ್‌ವೆಲ್‌ ದೂರು ನೀಡಿದ್ದಾರೆ. ಈ ಬಗ್ಗೆ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66 ಮತ್ತು ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್‌ 351 (4)ರಡಿ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ‘ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT