ಅಪಘಾತ
–ಪ್ರಾತಿನಿಧಿಕ ಚಿತ್ರ
ಕಾಸರಗೋಡು: ಕಾಞಂಗಾಡು ರೈಲು ನಿಲ್ದಾಣದ ಬಳಿ ಶನಿವಾರ ರಾತ್ರಿ ಹಳಿ ದಾಟುವಾಗ ರೈಲು ಡಿಕ್ಕಿಯಾಗಿ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ.
ಕೊಟ್ಟಾಯಂ ನಿವಾಸಿಗಳಾದ ಚಿನ್ನಮ್ಮ (70), ಏಜೆಲೆನಾ (30), ಆಲಿಸ್ ಥಾಮಸ್ (60) ಮೃತಪಟ್ಟವರು ಎಂದು ಪೊಲೀಸರು ಗುರುತಿಸಿದ್ದಾರೆ.
ಕಾಸರಗೋಡಿನ ಸಂಬಂಧಿಕರ ಮನೆಯಲ್ಲಿ ನಡೆಯಲಿದ್ದ ವಿವಾಹಕ್ಕೆ ತೆರಳಲು ಬಂದಿದ್ದಾಗ ಅವಘಡ ನಡೆದಿದೆ. ಹೊಸದುರ್ಗ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.