ADVERTISEMENT

ಕುತ್ಲೂರಿನಲ್ಲಿ ಹುಲಿ ಪ್ರತ್ಯಕ್ಷ, ಗ್ರಾಮದಲ್ಲಿ ಆತಂಕ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2020, 5:43 IST
Last Updated 18 ಅಕ್ಟೋಬರ್ 2020, 5:43 IST

ಮಂಗಳೂರು: ಬೆಳ್ತಂಗಡಿ ತಾಲ್ಲೂಕಿನ ಕುತ್ಲೂರು ಗ್ರಾಮದ ಬಜಿಲಪಾದೆ ಎಂಬಲ್ಲಿ ಶನಿವಾರ ರಾತ್ರಿ 9 ಗಂಟೆಗೆ ಹುಲಿ ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ.

‘ವೇಣೂರು– ನಾರಾವಿ ರಸ್ತೆಯಲ್ಲಿ 9.15ರ ಸುಮಾರಿಗೆ ನಾನು ಬೈಕ್‌ನಲ್ಲಿ ಸಾಗುತ್ತಿದ್ದಾಗ ಹುಲಿ ಕಾಣಿಸಿಕೊಂಡಿದೆ. ಸ್ವಲ್ಪ ಹೊತ್ತು ರಸ್ತೆಯಲ್ಲೇ ಇದ್ದ ಹುಲಿ ನಂತರ ಪೊದೆಯೊತ್ತ ಸಾಗಿದೆ’ ಎಂದು ಪ್ರತ್ಯಕ್ಷದರ್ಶಿ ರವಿ ಪೂಜಾರಿ ತಿಳಿಸಿದ್ದಾರೆ.

‘ಬಜಿಲಪಾದೆಯ ಸುತ್ತಮುತ್ತ ಎರಡು ವಾರಗಳ ಅಂತರದಲ್ಲಿ ನಾನು ಮೂರು ಬಾರಿ ಹುಲಿಯನ್ನು ನೋಡಿದ್ದೇನೆ. ವಾರದ ಹಿಂದೆ ಗೂಡಂಗಡಿಯೊಂದರ ಹತ್ತಿರ ಕಾಣಿಸಿಕೊಂಡಿತ್ತು’ ಎಂದು ಮತ್ತೊಬ್ಬರು ಪ್ರತ್ಯಕ್ಷದರ್ಶಿ ಪ್ರಭಾಕರ ಪೂಜಾರಿ ಹೇಳಿದ್ದಾರೆ.

ADVERTISEMENT

ಗ್ರಾಮದಲ್ಲಿ ಆತಂಕ: ಗ್ರಾಮದಲ್ಲಿ ಕೆಲವು ನಾಯಿಗಳು ನಾಪತ್ತೆಯಾಗುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಅರಣ್ಯ ಇಲಾಖೆಯವರು ತಕ್ಷಣ ಹುಲಿಯನ್ನು ಸೆರೆಹಿಡಿದು ಸ್ಥಳಾಂತರ ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.