ADVERTISEMENT

ಮಂಗಳೂರು | ಸಂಚಾರ ನಿಯಮ ಪಾಲನೆ: ಜೀವ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 6 ಜನವರಿ 2026, 6:25 IST
Last Updated 6 ಜನವರಿ 2026, 6:25 IST
ಸಂಚಾರ ನಿಯಮ ಜಾಗೃತಿ ಕುರಿತ ಭಿತ್ತಿಪತ್ರವನ್ನು ಬಿಡುಗಡೆಗೊಳಿಸಲಾಯಿತು 
ಸಂಚಾರ ನಿಯಮ ಜಾಗೃತಿ ಕುರಿತ ಭಿತ್ತಿಪತ್ರವನ್ನು ಬಿಡುಗಡೆಗೊಳಿಸಲಾಯಿತು    

ಮಂಗಳೂರು: ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ರಸ್ತೆ ಅಪಘಾತಗಳನ್ನು ತಡೆಗಟ್ಟಬಹುದು. ರಸ್ತೆ ಸುರಕ್ಷತೆಯ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದೆ. ಎಲ್ಲರೂ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ ರಸ್ತೆ ಅಪಘಾತಗಳನ್ನು ತಡೆಯಲು ಸಹಕರಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಜೈಬುನ್ನೀಸಾ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸಾರಿಗೆ ಇಲಾಖೆ, ಪೊಲೀಸ್ ಇಲಾಖೆ ಸಹಯೋಗದಲ್ಲಿ ಸೋಮವಾರ ಇಲ್ಲಿ ನಡೆದ 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಅಪಘಾತದಿಂದ ಅನೇಕ ಮಂದಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ರಸ್ತೆ ನಿಯಮಗಳನ್ನು ಪಾಲಿಸುವುದೊಂದೇ ಜೀವ ರಕ್ಷಣೆಗಿರುವ ಸಾಧನ. ನಮ್ಮನ್ನೇ ನಂಬಿಕೊಂಡಿರುವ ಕುಟುಂಬದ ಕ್ಷೇಮವನ್ನು ವಾಹನ ಸವಾರರು ಸದಾ ನೆನಪಿನಲ್ಲಿಡಬೇಕು ಎಂದು ಹೇಳಿದರು.

ADVERTISEMENT

ರಸ್ತೆ ಸುರಕ್ಷತೆಯ ಬಗ್ಗೆ ಜನರಿಗೆ ಸಮಗ್ರ ಮಾಹಿತಿ ನೀಡಬೇಕು. ಯುವಜನರಲ್ಲಿ ಕಾನೂನು ಅರಿವಿನ ಕೊರತೆಯಿದ್ದು, ಶಾಲಾ -ಕಾಲೇಜು ಮಕ್ಕಳಿಗೆ ಸಂಚಾರ ನಿಯಮದ ಬಗ್ಗೆ ಅರಿವು ಮೂಡಿಸಬೇಕು. ಅತಿಯಾದ ವೇಗಮತ್ತು ಮದ್ಯ ಸೇವಿಸಿ, ಅಜಾಗರೂಕತೆಯಿಂದ ವಾಹನ ಚಲಾಯಿಸುವುದು ಅಪಘಾತಕ್ಕೆ ಕಾರಣವಾಗುತ್ತಿದೆ ಎಂದರು.

ಉಪಸಾರಿಗೆ ಆಯುಕ್ತ ಮುರಗೇಂದ್ರ ಬಸವರಾಜ ಶಿರೋಳಕರ ಅಧ್ಯಕ್ಷತೆ ವಹಿಸಿದ್ದರು. ಸಂಚಾರ ಪೋಲಿಸ್ ಉಪವಿಭಾಗದ ಡಿಸಿಪಿ ನಜ್ಮಾ ಫಾರೂಕಿ ಉಪಸ್ಥಿತರಿದ್ದರು. ಕಛೇರಿ ಅಧೀಕ್ಷಕಿ ರಶ್ಮಿ ಸ್ವಾಗತಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.