ADVERTISEMENT

ನೆರಿಯ: ಬುಡಕಟ್ಟು ಅಧ್ಯಯನ ಶಿಬಿರ

​ಪ್ರಜಾವಾಣಿ ವಾರ್ತೆ
Published 13 ಮೇ 2025, 12:56 IST
Last Updated 13 ಮೇ 2025, 12:56 IST
ಧರ್ಮಸ್ಥಳ ಪೊಲೀಸ್ ಠಾಣೆಯ ಪಿಎಸ್‌ಐ ಸಮರ್ಥ್ ಗಾಣಿಗೇರ ಅವರು ಮಾಹಿತಿ ನೀಡಿದರು
ಧರ್ಮಸ್ಥಳ ಪೊಲೀಸ್ ಠಾಣೆಯ ಪಿಎಸ್‌ಐ ಸಮರ್ಥ್ ಗಾಣಿಗೇರ ಅವರು ಮಾಹಿತಿ ನೀಡಿದರು   

ಉಜಿರೆ: ಸಾಮಾಜಿಕ ಮಾಧ್ಯಮವನ್ನು ದುರುಪಯೋಗ ಮಾಡದೆ ಎಚ್ಚರಿಕೆಯಿಂದ ಬಳಸಬೇಕು ಎಂದು ಧರ್ಮಸ್ಥಳ ಪೊಲೀಸ್ ಠಾಣೆಯ ಪಿಎಸ್‌ಐ ಸಮರ್ಥ್ ಗಾಣಿಗೇರ ಹೇಳಿದರು.

ಮಂಗಳೂರು ವಿ.ವಿ. ಸಮಾಜಕಾರ್ಯ ಸ್ನಾತಕೋತ್ತರ ಪದವಿ ತರಗತಿಯ ಪ್ರಥಮ ವರ್ಷದ ವಿದ್ಯಾರ್ಥಿಗಳು ಬೆಳ್ತಂಗಡಿ ತಾಲ್ಲೂಕಿನ ನೆರಿಯದಲ್ಲಿ ಆಯೋಜಿಸಿದ್ದ ಬುಡಕಟ್ಟು ಅಧ್ಯಯನ ಶಿಬಿರದಲ್ಲಿ ಸಾಮಾಜಿಕ ಮಾಧ್ಯಮಗಳ ಬಳಕೆ ಕುರಿತು ಅವರು ಜಾಗೃತಿ ಮೂಡಿಸಿದರು.

ಬೆಳ್ತಂಗಡಿ ಕೆನರಾ ಬ್ಯಾಂಕ್ ಶಾಖೆಯ ಹಿರಿಯ ಅಧಿಕಾರಿ ಉಷಾ ಅವರು ಜೀವ ವಿಮೆ ಮತ್ತು ಉಳಿತಾಯ ಖಾತೆ ಕುರಿತು ಮಾಹಿತಿ ನೀಡಿದರು.

ADVERTISEMENT

ಡಾ.ಯಶಸ್ವಿನಿ ಬಟ್ಟಂಗಾಯ ಅವರು ಉಪನ್ಯಾಸ ನೀಡಿದರು.

ವೈಶಾಲಿ ಸುರೇಶ್ ಆದಿಮನಿ, ಶ್ರೇಯಸ್ ಶೆಣೈ ಕಾರ್ಯಕ್ರಮ ನಿರ್ವಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.