ADVERTISEMENT

ಬಂಟ್ವಾಳ: ತುಳು ನಾಟಕೋತ್ಸವ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2022, 5:52 IST
Last Updated 1 ನವೆಂಬರ್ 2022, 5:52 IST
ಬಂಟ್ವಾಳ ತಾಲ್ಲೂಕಿನ ತುಳು ನಾಟಕ ಕಲಾವಿದರ ಒಕ್ಕೂಟ ವತಿಯಿಂದ ಶನಿವಾರ ಆರಂಭಗೊಂಡ ತುಳು ನಾಟಕೋತ್ಸವಕ್ಕೆ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಚಾಲನೆ ನೀಡಿದರು. ಮಾಜಿ ಸಚಿವ ಬಿ.ರಮಾನಾಥ ರೈ ಇದ್ದಾರೆ.
ಬಂಟ್ವಾಳ ತಾಲ್ಲೂಕಿನ ತುಳು ನಾಟಕ ಕಲಾವಿದರ ಒಕ್ಕೂಟ ವತಿಯಿಂದ ಶನಿವಾರ ಆರಂಭಗೊಂಡ ತುಳು ನಾಟಕೋತ್ಸವಕ್ಕೆ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಚಾಲನೆ ನೀಡಿದರು. ಮಾಜಿ ಸಚಿವ ಬಿ.ರಮಾನಾಥ ರೈ ಇದ್ದಾರೆ.   

ಬಂಟ್ವಾಳ: ಇಲ್ಲಿನ ತುಳು ನಾಟಕ ಕಲಾವಿದರ ಒಕ್ಕೂಟದ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಭಾಗಿತ್ವದಲ್ಲಿ ಬಿ.ಸಿ.ರೋಡು ಸ್ಪರ್ಶ ಸಭಾಂಗಣದಲ್ಲಿ ಶನಿವಾರ ಸಂಜೆ ಆಯೋಜಿಸಲಾದ ತುಳು ನಾಟಕೋತ್ಸವಕ್ಕೆ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಚಾಲನೆ ನೀಡಿದರು.

ಮುಖಂಡ ದಯಾನಂದ ಕತ್ತಲಸಾರ್ ಮಾತನಾಡಿ, ತುಳು ಭಾಷೆ 8ನೇ ಪರಿಚ್ಛೇಧಕ್ಕೆ ಸೇರ್ಪಡೆಗೆ ರಾಜಕೀಯ ರಹಿತ ಪ್ರಯತ್ನ ನಡೆಯಬೇಕು ಎಂದರು.

ಮಾಜಿ ಸಚಿವ ಬಿ.ರಮಾನಾಥ ರೈ,ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ಅಧ್ಯಕ್ಷ ಕಿಶೋರ್ ಡಿ. ಶೆಟ್ಟಿ, ಮುಖಂಡರಾದ ಎ.ಸಿ.ಭಂಡಾರಿ, ಚಂದ್ರಹಾಸ ಶೆಟ್ಟಿ, ವಿಶ್ವನಾಥ ಬಂಟ್ವಾಳ, ರೋಶನ್ ರೈ, ಉದ್ಯಮಿ ಲತೀಫ್ ಎಂ., ಮಂಜುನಾಥ ರೈ, ಮಾಕ್ಸಿಂ ಸಿಕ್ವೇರ, ಪಿಯೂಸ್ ಎಲ್. ರೋಡ್ರಿಗಸ್, ಸುದರ್ಶನ ಜೈನ್, ಭಾಸ್ಕರ ಅಜೆಕಲ ಇದ್ದರು.

ADVERTISEMENT

ಮಹಾಬಲ ದಾಸಕೋಡಿ ಅವರನ್ನು ಸನ್ಮಾನಿಸಲಾಯಿತು. ಒಕ್ಕೂಟ ಅಧ್ಯಕ್ಷ ಸುಭಾಶ್ಚಂದ್ರ ಜೈನ್, ಕಲಾವಿದ ಮಂಜು ವಿಟ್ಲ , ಎಚ್‌.ಕೆ. ನಯನಾಡು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.