ADVERTISEMENT

ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ತುಳು; ಅಡ್ಡಿ ನಿವಾರಣೆಗೆ ವಿಶೇಷ ಪ್ರಾರ್ಥನೆ

ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ತುಳು ಸೇರ್ಪಡೆ

​ಪ್ರಜಾವಾಣಿ ವಾರ್ತೆ
Published 13 ಜೂನ್ 2022, 7:51 IST
Last Updated 13 ಜೂನ್ 2022, 7:51 IST
ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವುದಕ್ಕೆ ಇರುವ ಅಡ್ಡಿ ನಿವಾರಣೆಗಾಗಿ ಪ್ರಾರ್ಥಿಸಿ ಮಂಗಳೂರಿನ ಕುದ್ರೋಳಿಯ ಗೋಕರ್ಣನಾಥ ದೇವಸ್ಥಾನದಲ್ಲಿ ಭಾನುವಾರ ವಿಶೇಷ ಪೂಜೆ ಸಲ್ಲಿಸಲಾಯಿತು
ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವುದಕ್ಕೆ ಇರುವ ಅಡ್ಡಿ ನಿವಾರಣೆಗಾಗಿ ಪ್ರಾರ್ಥಿಸಿ ಮಂಗಳೂರಿನ ಕುದ್ರೋಳಿಯ ಗೋಕರ್ಣನಾಥ ದೇವಸ್ಥಾನದಲ್ಲಿ ಭಾನುವಾರ ವಿಶೇಷ ಪೂಜೆ ಸಲ್ಲಿಸಲಾಯಿತು   

ಮಂಗಳೂರು: ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡುವುದಕ್ಕೆ ಇರುವ ತಾಂತ್ರಿಕ ಅಡ್ಡಿ ನಿವಾರಣೆಗಾಗಿ ತುಳುನಾಡಿನ ವಿವಿಧ ದೇವಾಲಯಗಳಲ್ಲಿ ಹಾಗೂ ದೈವಸ್ಥಾನಗಳಲ್ಲಿ ಭಾನುವಾರ ವಿಶೇಷ ಪೂಜೆ ನೆರವೇರಿಸಿ ಪ್ರಾರ್ಥನೆ ಸಲ್ಲಿಸಲಾಯಿತು.

ಉಡುಪಿ ಜಿಲ್ಲೆಯ ಬಾರ್ಕೂರಿನಿಂದ ಹಿಡಿದು ಕಾಸರಗೋಡು ಜಿಲ್ಲೆಯ ಮಂಜೇಶ್ವರ, ಕುಂಬಳೆಯವರೆಗಿನ ದೇವಾಲಯಗಳಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಜೈ ತುಳುನಾಡ್ ಮತ್ತು ಇತರ ತುಳು ಸಂಘಟನೆಗಳು ವಿಶೇಷ ಪೂಜೆ ನೆರವೇರಿಸಿದವು.

ಬೇಲಾಡಿಯ ಪುಂಡರೀಕ ವಿಷ್ಣುಮೂರ್ತಿ ದೇವಾಲಯ, ಈದು ಅಲಿಮಾರು ಗುಡ್ಡೆಯಬ್ರಹ್ಮ ಮೊಗೇರ ದೈವಸ್ಥಾನ, ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನ, ಮಲ್ಪೆ ಕಲ್ಮಾಡಿಯ ಕೊರಗಜ್ಜನ ಕಟ್ಟೆ, ಪಳ್ಳಿಯ ಮಹಾಕಾಳಿ ಮಠ, ಬಾರ್ಕೂರಿನ ಪಂಚಲಿಂಗೇಶ್ವರ ದೇವಸ್ಥಾನ, ಕುಂಬ್ಳೆ ಸಮೀಪದ ಸಿರಿಯ ಶಂಕರನಾರಾಯಣ ದೇವಸ್ಥಾನ, ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ, ಕುದ್ರೋಳಿಯ ಗೋಕರ್ಣನಾಥೇಶ್ವರ ದೇವಸ್ಥಾನಗಳಲ್ಲಿ ತುಳು ಸಂಘಟನೆಗಳ ಪ್ರಮುಖರು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ADVERTISEMENT

ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾದ ಹಾಗೂ ದೇಶದ ಅತ್ಯಂತ ಹಳೆಯ ಭಾಷೆಗಳಲ್ಲಿ ಒಂದಾದ ತುಳು ಭಾಷೆಯನ್ನು ಶಾಸ್ತ್ರೀಯ ಭಾಷೆಯನ್ನಾಗಿ ಘೋಷಣೆ ಮಾಡಬೇಕು ಎಂದೂ ತುಳು ಸಂಘಟನೆಗಳ ಪ್ರಮುಖರು ಪ್ರಾರ್ಥಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.