ADVERTISEMENT

ದಕ್ಷಿಣ ಕನ್ನಡ | ಕೊರೊನಾ ಸೋಂಕಿನಿಂದ ಇಬ್ಬರು ಸಾವು

​ಪ್ರಜಾವಾಣಿ ವಾರ್ತೆ
Published 6 ಜುಲೈ 2020, 5:59 IST
Last Updated 6 ಜುಲೈ 2020, 5:59 IST
   

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನಿಂದ ಬಳಲುತ್ತಿದ್ದ ಇಬ್ಬರು ಸೋಮವಾರ ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 24ಕ್ಕೇರಿದೆ.

ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಕುತ್ತಾರು ನಿವಾಸಿಯಾಗಿದ್ದ 52 ವರ್ಷ ವಯಸ್ಸಿನ ಪುರುಷ ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಸೋಮವಾರ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಉಳ್ಳಾಲ ನಿವಾಸಿಯಾಗಿದ್ದ 62 ವರ್ಷ ವಯಸ್ಸಿನ ಪುರುಷನಲ್ಲೂ ಕೋವಿಡ್ ಸೋಂಕು ದೃಢಪಟ್ಟಿತ್ತು. ಅವರನ್ನು ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ADVERTISEMENT

ಇಬ್ಬರ ಮೃತ ದೇಹಗಳನ್ನು ಆಸ್ಪತ್ರೆಗಳಿಂದ ಸ್ಥಳಾಂತರಿಸಲಾಗುತ್ತಿದೆ. ಮೃತರಿಗೆ ಇದ್ದ ಇತರ ಅನಾರೋಗ್ಯದ ಸಮಸ್ಯೆಗಳ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.