ನಾಯಿ
ಪುತ್ತೂರು: ನಾಯಿ ಕಚ್ಚಿ ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಕುಂಬ್ರ ಸಮೀಪದ ಕೆದಂಬಾಡಿ ಗ್ರಾಮದ ಗಟ್ಟಮನೆ ಎಂಬಲ್ಲಿ ನಡೆದಿದೆ. ಹುಚ್ಚು ನಾಯಿ ಕಡಿದಿದೆ ಎಂಬ ಶಂಕೆ ವ್ಯಕ್ತವಾಗಿರುವುದರಿಂದ ಸ್ಥಳೀಯರಲ್ಲಿ ಆತಂಕ ಮೂಡಿದೆ.
ಕುಂಬ್ರದ ತರಕಾರಿ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿರುವ ಕೆದಂಬಾಡಿ ಗ್ರಾಮದ ಇದ್ಪಾಡಿಯ ಅಬೂಬಕ್ಕರ್ ಮನೆಯಿಂದ ಅಂಗಡಿಗೆ ತೆರಳುತ್ತಿದ್ದಾಗ ನಾಯಿ ಅವರ ಕಾಲಿಗೆ ಕಚ್ಚಿದೆ. ಅದೇ ಪರಿಸರದ ಮಹಿಳೆಯೊಬ್ಬರಿಗೂ ಅದೇ ನಾಯಿ ಕಚ್ಚಿ ಗಾಯಗೊಳಿಸಿದೆ. ಸಾಮಾಜಿಕ ಕಾರ್ಯಕರ್ತ ಅಶ್ರಫ್ ಸಾರೆಪುಣಿ ಎಂಬವರು ಸ್ಥಳೀಯ ಗ್ರಾಮ ಪಂಚಾಯಿತಿಗೆ ಹಾಗೂ ಕುಂಬ್ರದ ಶಾಲೆಗಳಿಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಜನರಲ್ಲಿ ಜಾಗೃತಿ ಮೂಡಿಸುವಂತೆ ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.