ADVERTISEMENT

ಮಂಗಳೂರು: ಡ್ರಗ್ಸ್ ಪೂರೈಸುತ್ತಿದ್ದ ಉಗಾಂಡದ ಮಹಿಳೆ ಬಂಧನ

​ಪ್ರಜಾವಾಣಿ ವಾರ್ತೆ
Published 12 ಜನವರಿ 2026, 13:52 IST
Last Updated 12 ಜನವರಿ 2026, 13:52 IST
   

ಮಂಗಳೂರು: ನಗರದ ಆರು ಮಂದಿ ಡ್ರಗ್ ಪೆಡ್ಲರ್‌ಗಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಉಗಾಂಡದ ಮಹಿಳೆಯನ್ನು ಬೆಂಗಳೂರು ಸಮೀಪ ಜಿಗಣಿಯಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಜಲಿಯಾ ಜಲ್ವಾಂಗೊ ಬಂಧಿತ ಮಹಿಳೆ. ಆಕೆಯಿಂದ ₹4 ಕೋಟಿ ಮೌಲ್ಯದ 4 ಕೆಜಿ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಈ ಮಹಿಳೆ ಬಂಧನದ ಮೂಲಕ ಮಂಗಳೂರಿನ ಆರು ಡ್ರಗ್ ಪೆಡ್ಲರ್‌ಗಳಿಗೆ ಡ್ರಗ್ಸ್ ಪೂರೈಕೆಯಾಗುತ್ತಿದ್ದ ಜಾಲವನ್ನು ಕಡಿತ ಮಾಡಿದಂತಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ‌ .

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.