ADVERTISEMENT

ಮಹಿಳಾ ಸಬಲೀಕರಣದತ್ತ ತೊಡಗಿಸುವ ಯುಜಿಸಿ: ಬಿ.ಕೆ.ಸರೋಜಿನಿ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2025, 5:55 IST
Last Updated 3 ಆಗಸ್ಟ್ 2025, 5:55 IST
ಮಂಗಳೂರು ವಿಶ್ವವಿದ್ಯಾನಿಲಯದ ಯುಜಿಸಿ ಮಹಿಳಾ ಅಧ್ಯಯನ ಕೇಂದ್ರದ ನಿರ್ದೇಶಕಿ ಪ್ರೊ.ಬಿ.ಕೆ.ಸರೋಜಿನಿ ಕಾರ್ಯಕ್ರಮ ಉದ್ಘಾಟಿಸಿದರು
ಮಂಗಳೂರು ವಿಶ್ವವಿದ್ಯಾನಿಲಯದ ಯುಜಿಸಿ ಮಹಿಳಾ ಅಧ್ಯಯನ ಕೇಂದ್ರದ ನಿರ್ದೇಶಕಿ ಪ್ರೊ.ಬಿ.ಕೆ.ಸರೋಜಿನಿ ಕಾರ್ಯಕ್ರಮ ಉದ್ಘಾಟಿಸಿದರು   

ಉಳ್ಳಾಲ: ಸ್ವಾವಲಂಬಿ ಉದ್ಯೋಗದ ಮೂಲಕ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಗ್ರಾಮಸಂಪರ್ಕ ಅಭಿಯಾನ ಪೂರಕವಾಗಿದೆ. ಇದರ ಸದುಪಯೋಗವನ್ನು ಗ್ರಾಮೀಣ ಮಹಿಳೆಯರು ಪಡೆದುಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಯುಜಿಸಿ ಮಹಿಳಾ ಅಧ್ಯಯನ ಕೇಂದ್ರದ ನಿರ್ದೇಶಕಿ,‌ ರಾಸಾಯನಿಕ ವಿಜ್ಞಾನ ಪ್ರಾಧ್ಯಾಪಕಿ ಬಿ.ಕೆ.ಸರೋಜಿನಿ ಹೇಳಿದರು.

ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ವತಿಯಿಂದ ವಿವಿಧ ಸಂಘ–ಸಂಸ್ಥೆಗಳ ಸಹಯೋಗದಲ್ಲಿ  ಕೋಟೆಕಾರು ಬೀರಿ ಜಂಕ್ಷನ್‌ನಲ್ಲಿರುವ ಕೆ.ಸುಬ್ಬಣ್ಣಯ್ಯ ಸ್ಮಾರಕ ಕೋಟೆಕಾರು ಸಹಕಾರ ಸೌಧದಲ್ಲಿ ಹಮ್ಮಿಕೊಂಡಿರುವ ಗ್ರಾಮ ಸಂಪರ್ಕ ಅಭಿಯಾನ, ಹಡಿಲು ಭೂಮಿ ಕೃಷಿಗೆ ಚಾಲನೆ, ಮಹಿಳಾ ಸ್ವಾವಲಂಬಿ ಉದ್ಯೋಗ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಗ್ರಾಮೀಣ ಪ್ರದೇಶಧಲ್ಲಿ ಮಹಿಳೆಯರನ್ನು ಸಹಕಾರ ತತ್ವದಡಿ ಒಟ್ಟು ಸೇರಿಸಿ ಸ್ವ ಉದ್ಯೋಗ ಸೇರಿದಂತೆ ಅವರಿಗೆ ಮಾರ್ಗದರ್ಶನ ನೀಡಬೇಕು. ವಿದ್ಯಾರ್ಥಿಗಳನ್ನು ಮಹಿಳಾ ಸಬಲೀಕರಣದಲ್ಲಿ ತೊಡಗಿಸಿಕೊಳ್ಳುವ ಉದ್ದೇಶದಿಂದ ಯುಜಿಸಿ ಮಹಿಳಾ ಅಧ್ಯಯನ ಕೇಂದ್ರ ಕಾರ್ಯ ನಿರ್ವಹಿಸುತ್ತಿದೆ ಎಂದರು.

ADVERTISEMENT

ಪದವಿಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಜಯಾನಂದ ಎನ್.ಸುವರ್ಣ ಮಾತನಾಡಿ, ಕೃಷಿ ಸಂಸ್ಕೃತಿ ಉಳಿಸಬೇಕಿದ್ದು, ಮಹಿಳೆಯರಿಗೆ ಸ್ವಾಭಿಮಾನದ ಬದುಕು ಕಟ್ಟಲು ಗ್ರಾಮ ಸಂಪರ್ಕ ಅಭಿಯಾನದಂತಹ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಹಣಾಽಕಾರಿ ಜ್ಯೋತಿರಾಜ್ ಮಾತನಾಡಿದರು.

ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಬ್ಯಾಂಕ್ ಅಧ್ಯಕ್ಷ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರುಗುತ್ತು ಅಧ್ಯಕ್ಷತೆ ವಹಿಸಿದ್ದರು.

ಕೋಟೆಕಾರು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ದಿವ್ಯಾ ಸತೀಶ್ ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ರಶ್ಮಿ, ಕೋಟೆಕಾರು ಬ್ಯಾಂಕ್ ಉಪಾಧ್ಯಕ್ಷ ಕೆ.ಬಿ.ಅಬೂಸಾಲಿ, ನಿರ್ದೇಶಕರಾದ ಗಂಗಾಧರ್ ಉಳ್ಳಾಲ್, ಕೃಷ್ಣಪ್ಪ ಸಾಲ್ಯಾನ್, ಉದಯ ಕುಮಾರ್ ಶೆಟ್ಟಿ, ಅರುಣ್ ಕುಮಾರ್ ಯು., ರಾಘವ ಆರ್.ಉಚ್ಚಿಲ್, ರಾಘವ ಸಿ.ಉಚ್ಚಿಲ್, ಪದ್ಮಾವತಿ ಎಸ್.ಶೆಟ್ಟಿ, ಸುರೇಖಾ ಚಂದ್ರಹಾಸ, ಬಾಬು ನಾಯ್ಕ, ಕಿರಣ್ ಕುಮಾರ್ ಶೆಟ್ಟಿ ಭಾಗವಹಿಸಿದ್ದರು.

ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಽಕಾರಿ ಹರ್ಷವರ್ಧನ ಉಳ್ಳಾಲ್ ಸ್ವಾಗತಿಸಿದರು. ಮಣಿಪಾಲದ ಭಾರತ್ ವಿಕಾಸ್ ಟ್ರಸ್ಟ್ ಕಾರ್ಯಕ್ರಮ ವ್ಯವಸ್ಥಾಪಕ ಜೀವನ್ ಕೊಲ್ಯ ಕಾರ್ಯಕ್ರಮ ನಿರೂಪಿಸಿದರು. ಉಳ್ಳಾಲ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಸಂತ್ ಎನ್. ಕೊಣಾಜೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕಿ ಸುಮಲತಾ ಕೊಣಾಜೆ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.