ಉಜಿರೆ: ಬದುಕಿನಲ್ಲಿ ಕಷ್ಟ ಅನುಭವಿಸದೆ ಸುಖ ಪಡೆಯಲು ಸಾಧ್ಯವಿಲ್ಲ ಎಂದು ಉಜಿರೆಯ ಉದ್ಯಮಿ ಮೋಹನ್‌ಕುಮಾರ್ ಹೇಳಿದರು.
ಉಜಿರೆಯ ಇಂದ್ರಪ್ರಸ್ಥ ಸಭಾಂಗಣದಲ್ಲಿ ಎಸ್‌ಡಿಎಂ ಪಾಲಿಟೆಕ್ನಿಕ್ ಹಿರಿಯ ವಿದ್ಯಾರ್ಥಿಗಳ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ಬದುಕಿನಲ್ಲಿ ಎದುರಾಗುವ ಸೋಲು, ಅವಮಾನ, ನಿರಾಶೆಯನ್ನು ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಎದುರಿಸಿದರೆ ಉನ್ನತ ಸಾಧನೆ ಮಾಡಬಹುದು ಎಂದು ಹೇಳಿದರು.
ಸಂಸ್ಥೆಯ ಪ್ರಾಂಶುಪಾಲ ಸಂತೋಷ್ ಅಧ್ಯಕ್ಷತೆ ವಹಿಸಿದ್ದರು.
ಸಂಯೋಜಕಿ ಮೇರಿಸ್ಮಿತಾ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಾಧಕರನ್ನು ಗೌರವಿಸಲಾಯಿತು.
ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಣಯರಾಜ ಜೈನ್, ಸಂಸ್ಥೆಯ ವ್ಯವಸ್ಥಾಪಕ ಚಂದ್ರನಾಥ ಜೈನ್ ಭಾಗವಹಿಸಿದ್ದರು. ನಿಖಿತ್‌ಜೈನ್ ಸ್ವಾಗತಿಸಿದರು. ನಿಶ್ಮಿತಾ ವಂದಿಸಿದರು. ಸಾಯಿಕಿರಣ್ ಕಾರ್ಯಕ್ರಮ ನಿರ್ವಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.