ಮಂಗಳೂರು: ಉಳ್ಳಾಲ ನಗರ ಸಭೆಯ ಕಾಂಗ್ರೆಸ್ ಕೌನ್ಸಿಲರ್ ರವಿಚಂದ್ರ ಗಟ್ಟಿ, ಮದ್ಯದ ಬಾಟಲಿ ಹಿಡಿದುಕೊಂಡು ವಿಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ.
ಜನಪ್ರತಿನಿಧಿಯಾಗಿರುವ ರವಿ ಅವರು ಮದ್ಯದ ಬಾಟಲಿ ಹಿಡಿದು ಕೋವಿಡ್–19 ವಾಸಿಯಾಗಲು ಮದ್ಯಪಾನ ಮಾಡಿ ಎಂದು ಪ್ರೇರೇಪಿಸುವುದು ತಪ್ಪು ಸಂದೇಶ ರವಾನಿಸುವುದಲ್ಲದೆ, ಅಬಕಾರಿ ಕಾಯ್ದೆ ಪ್ರಕಾರ ಅಪರಾಧ. ಮಕ್ಕಳು ಈ ವಿಡಿಯೊ ನೋಡಿ ಕೊರೊನಾಕ್ಕೆ ಔಷಧವೆಂದು ಕುಡಿದರೆ ಗತಿ ಏನು ಎಂದು ಜನರು ಪ್ರಶ್ನೆ ಮಾಡುತ್ತಿದ್ದಾರೆ.
‘ರಮ್‌ಗೆ ಕರಿಮೆಣಸು ಪೌಡರ್ ಸೇರಿಸಿ ಕುಡಿಯುವುದರ ಜತೆಗೆ ಎರಡು ಮೊಟ್ಟೆಗೆ ಕರಿಮೆಣಸು ಪುಡಿ ಸೇರಿಸಿ, ಹಾಫ್ ಬಾಯ್ಲ್ಡ್ ಮಾಡಿ ರಮ್ ಜತೆ ಸೇವಿಸಿದರೆ ಕೋವಿಡ್–19 ಹತ್ತಿರ ಸುಳಿಯಲ್ಲ. ನಾನು ಕುಡಿಯೋದಿಲ್ಲ, ಮೀನು ತಿನ್ನೋದಿಲ್ಲ. ಆದರೆ ನಾನು ಹೇಳುವುದು ಅನುಭವದ ಮಾತು. ಹೀಗಾಗಿ ಯಾರೂ ಕೊರೊನಾಗೆ ಹೆದರಬೇಡಿ; ರಮ್ ಕುಡಿಯಿರಿ’ ಎಂದು ಹೇಳಿರುವ ವಿಡಿಯೊ ವೈರಲ್ ಆಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.