ಉಳ್ಳಾಲ (ದಕ್ಷಿಣ ಕನ್ನಡ): ತಲಪಾಡಿ ಟೋಲ್ ಗೇಟ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.
ಹಿಮ್ಮುಖವಾಗಿ ಚಲಿಸಿದ ಬಸ್ ಅಲ್ಲೇ ನಿಂತಿದ್ದ ಆಟೋಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಾಸರಗೋಡು ಜಿಲ್ಲೆಯ ಮಂಜೇಶ್ವರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.