
ಉಳ್ಳಾಲ: ನರಿಂಗಾನ ಗ್ರಾಮದ ಕಲ್ಲರಕೋಡಿ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಪ್ರಭಾಕರ್ ಜೋಗಿ (51) ಅವರ ಮೃತದೇಹ ಕೋಟೆಕಾರು ಕೊಂಡಾಣದ ಅವರ ಮನೆಯ ಬಾವಿಯಲ್ಲಿ ಶನಿವಾರ ಪತ್ತೆಯಾಗಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.
ಕೋಟೆಕಾರು ಕೊಂಡಾಣದ ಮನೆ ಆವರಣದಲ್ಲಿರುವ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಅನಾರೋಗ್ಯದ ಕಾರಣದಿಂದ ಆತ್ಮಹತ್ಯೆಗೆ ಶರಣಾಗಿರುವುದಾಗಿ ಶಂಕಿಸಲಾಗಿದೆ.
ಪ್ರಭಾಕರ್ ಅವರನ್ನು ಪತ್ನಿ ಮತ್ತು ಮಗ ಹುಡುಕಾಡಿದಾಗ ಬಾವಿಯಲ್ಲಿ ಶವ ಪತ್ತೆಯಾಗಿದೆ. ನರ ದೌರ್ಬಲ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ. ಮಂಗಳೂರು ಸೇರಿದಂತೆ ಉಳ್ಳಾಲ ತಾಲ್ಲೂಕಿನ ಹಲವು ಶಾಲೆಗಳಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದರು. ಶಿಕ್ಷಕರ ಸಂಘಟನೆ ಹಾಗೂ ಜೆಸಿಐನಲ್ಲೂ ಸಕ್ರಿಯರಾಗಿದ್ದರು. ಕಾರ್ಯಕ್ರಮ ನಿರೂಪಕರೂ ಆಗಿದ್ದರು. ಮೃತರ ಪುತ್ರ ನೀಡಿದ ದೂರಿನಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.