ಉಳ್ಳಾಲ: ಏಪ್ರಿಲ್‌ನಲ್ಲಿ ಉಳ್ಳಾಲ ಉರುಸ್ ನಡೆಯಲಿದ್ದು, ಇದರ ಭಾಗವಾಗಿ ನಗರಸಭೆ ವ್ಯಾಪ್ತಿಯಲ್ಲಿ ಆಗಬೇಕಾದ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸ್ಪೀಕರ್ ಯು.ಟಿ ಖಾದರ್ ಸೂಚನೆ ನೀಡಿದರು.
ಉಳ್ಳಾಲ ಜುಮಾ ಮಸೀದಿ (402) ಹಾಗೂ ಸಯ್ಯಿದ್ ಮದನಿ ದರ್ಗಾ ಸಮಿತಿ ಇದರ ಆಶ್ರಯದಲ್ಲಿ ನಡೆಯುವ 22ನೇ ಪಂಚ ವಾರ್ಷಿಕ ಮತ್ತು 432ನೇ ವಾರ್ಷಿಕ ಉಳ್ಳಾಲ ಉರೂಸ್ ಪ್ರಯುಕ್ತ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ರಸ್ತೆ ಹೊಂಡಗಳನ್ನು ಮುಚ್ಚಬೇಕು. ತಾತ್ಕಾಲಿಕ ಕಾಮಗಾರಿ ಮೂಲಕ ರಸ್ತೆ ಅಗಲೀಕರಣ ಮಾಡಬೇಕು ಎಂದು ಪಿಡಬ್ಲ್ಯೂಡಿ ಎಂಜಿನಿಯರ್ ದಾಸ್ ಪ್ರಕಾಶ್ ಅವರಿಗೆ ಸೂಚನೆ ನೀಡಿದರು. ಉಳ್ಳಾಲ ತಾಲ್ಲೂಕು ವ್ಯಾಪ್ತಿಯ ವಿವಿಧ ಗ್ರಾಮಗಳ ಅಧ್ಯಕ್ಷ, ಪಿಡಿಒ ಅವರನ್ನು ಕರೆಸಿ, ಸಭೆ ನಡೆಸಿ ಸಮಸ್ಯೆ ಇತ್ಯರ್ಥ ಪಡಿಸಬೇಕು ಎಂದು ತಾ.ಪಂ.ಇ.ಒ.ಗುರುದತ್ ಅವರಿಗೆ ಸೂಚಿಸಿದರು.
ಉಳ್ಳಾಲ ಓವರ್ ಬ್ರಿಡ್ಜ್, ಮಾಸ್ತಿ ಕಟ್ಟೆ ಬಳಿ ಸ್ವಾಗತ ಕಮಾನು ನಿರ್ಮಾಣ ಆಗಬೇಕು.ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಶೌಚಾಲಯ,ಗಣ ತ್ಯಾಜ್ಯ ವಿಲೇವಾರಿ ಗೆ ಸೂಕ್ತ ವ್ಯವಸ್ಥೆ ಮಾಡಬೇಕು. ಕಳೆದ ಉರುಸ್ ಸಂದರ್ಭದಲ್ಲಿ ಮಾಡಿದ ಕಾಮಗಾರಿಯ ದುಡ್ಡು ಮೂರು ವರ್ಷಗಳ ಬಳಿಕ ಮಂಜೂರಾಗಿದೆ. ಈ ಬಾರಿ ಕೊಟೇಶನ್ ತಯಾರಿಸಿ ಕಾಮಗಾರಿ ಮುಗಿಸುವಂತೆ ನಗರ ಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಅಶ್ರಫ್ ರೈಟ್ ವೇ, ಪ್ರಧಾನ ಕಾರ್ಯದರ್ಶಿ ಶಿಹಾಬುದ್ದೀನ್ ಸಖಾಫಿ, ಕೋಶಾಧಿಕಾರಿ ನಾಝೀಮ್ ಮುಕಚೇರಿ, ಕಾರ್ಯದರ್ಶಿ ಮುಸ್ತಫಾ ಮದನಿನಗರ, ಇಸ್ಹಾಕ್ ಮೇಲಂಗಡಿ ,ಮೆಸ್ಕಾಂ ಎಇ.ದಯಾನಂದ್, ನಗರಸಭೆ ಗ್ರಾಮಕರಣಿಕ ಸುರೇಶ್, ಪೌರಾಯುಕ್ತ ಮತಡಿ, ತಹಶೀಲ್ದಾರ್ ಪುಟ್ಟರಾಜು, ಎಸಿಪಿ ಧನ್ಯ, ಸಂಚಾರ ವಿಭಾಗದ ಎಸಿಪಿ ನಜ್ಮ ಫಾರೂಕಿ, ನಗರಸಭೆ ಅಧ್ಯಕ್ಷೆ ಶಶಿಕಲಾ, ಉಪಾಧ್ಯಕ್ಷ ಸಪ್ನಾ ಹರೀಶ್ ಮತ್ತಿತರರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.