ಮೂಲ್ಕಿ: ಮೂಲ್ಕಿ–ಮೂಡುಬಿದಿರೆ ಕ್ಷೇತ್ರದಲ್ಲಿ ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸಲು ₹ 258 ಕೋಟಿ ವೆಚ್ಚದ ಯೋಜನೆಗೆ ಟೆಂಡರ್ ಕರೆಯಲಾಗಿದೆ ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.
ಕಾರ್ನಾಡು ಗಾಂಧಿ ಮೈದನಾದಲ್ಲಿ ನಡೆದಾಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮೂಲ್ಕಿ ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ಧ್ವಜಾರೋಹಣ ನೆರವೇರಿಸಿದರು.
ಸಾಧಕರಾದ ಸೆವ್ರಿನ್ ಲೋಬೊ ಏಳಿಂಜೆ, ಸತೀಶ್ ಶೆಟ್ಟಿ ಪಂಜ, ವನಜಾ ಶೆಟ್ಟಿ ಮೆನ್ನಬೆಟ್ಟು, ಪ್ರಜ್ವಲ್ ಅವರನ್ನು ಸನ್ಮಾನಿಸಲಾಯಿತು.
ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿ ರಘು, ಉಪತಹಶೀಲ್ದಾರ್ ದಿಲೀಪ್ ರೋಡ್ಕಕರ್, ಕಂದಾಯ ನಿರೀಕ್ಷಕ ದಿನೇಶ್, ಮೂಲ್ಕಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಇಂದು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.