ADVERTISEMENT

ವಿಶ್ವಸಂಸ್ಥೆ ಅಧಿವೇಶನಕ್ಕೆ ತೆರಳಿದ ನಿಯೋಗದಲ್ಲಿ ದಕ್ಷಿಣ ಕನ್ನಡ ಸಂಸದ ಚೌಟ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2025, 0:15 IST
Last Updated 8 ಅಕ್ಟೋಬರ್ 2025, 0:15 IST
ಸಂಸದ ಬ್ರಿಜೇಶ್ ಚೌಟ
ಸಂಸದ ಬ್ರಿಜೇಶ್ ಚೌಟ   

ಮಂಗಳೂರು: ನ್ಯೂಯಾರ್ಕ್‌ನಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ 80ನೇ ಸಾಮಾನ್ಯ ಸಭೆಯ ಅಧಿವೇಶನದಲ್ಲಿ ಭಾಗವಹಿಸಲು ಬಿಜೆಪಿ ಸಂಸದ ಪಿಪಿ ಚೌಧರಿ ನೇತೃತ್ವದ ನಿಯೋಗದ ಜೊತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅಮೆರಿಕಕ್ಕೆ ತೆರಳಿದ್ದಾರೆ.

ವಿವಿಧ ಪಕ್ಷಗಳ ಸಂಸದರನ್ನು ಒಳಗೊಂಡಿರುವ ಭಾರತದ ಎರಡು ನಿಯೋಗಗಳು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಈ ಅಧಿವೇಶನದಲ್ಲಿ ಭಾಗವಹಿಸಲಿವೆ. ಆ ಪೈಕಿ ಪಿಪಿ ಚೌಧರಿ ನೇತೃತ್ವದ ಮೊದಲ ನಿಯೋಗವು ಅ.8ರಿಂದ 14ರವರೆಗೆ ನಡೆಯುವ ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದು, ಈ ತಂಡದಲ್ಲಿ ಸಂಸದ ಬ್ರಿಜೇಶ್‌ ಚೌಟ ಸ್ಥಾನ ಪಡೆದಿದ್ದಾರೆ.

ಅನಿಲ್ ಬಲೂನಿ, ನಿಶಿಕಾಂತ್ ದುಬೆ, ಉಜ್ವಲ್ ನಿಕಮ್, ಎಸ್ ಫಾಂಗ್ನಾನ್ ಕೊನ್ಯಾಕ್, ಮೇಧಾ ವಿಶ್ರಮ್ ಕುಲಕರ್ಣಿ, ಪೂನಂ ಬೆನ್ ಮಾದಮ್, ವಂಶಿ ಕೃಷ್ಣ ಗದ್ದಾಮ್, ವಿವೇಕ್ ತಂಖಾ, ಟಿ ಸುಮತಿ, ಎನ್.ಕೆ. ಪ್ರೇಮಚಂದ್ರನ್, ಸೆಲ್ಜಾ, ಮಾತುಕುಮಿಲ್ಲಿ ಶ್ರೀಭರತ್ ಮತ್ತು ರಾಜೀವ್ ರೈ ಅವರೂ ಈ ನಿಯೋಗದಲ್ಲಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.