ಮಂಗಳೂರು: ‘ರಾಜ್ಯದ ಏಳು ವಿಶ್ವವಿದ್ಯಾಲಯಗಳ ಸ್ಥಿತಿಗತಿ ಅಧ್ಯಯನಕ್ಕೆ ರಚನೆ ಆಗಿರುವ ಸಂಪುಟ ಉಪಸಮಿತಿಯು ವರದಿ ಸಲ್ಲಿಸಿದ ಬಳಿಕ, ಸಂಪುಟ ಸಭೆಯಲ್ಲಿ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ ಹೇಳಿದರು.
ಶನಿವಾರ ಇಲ್ಲಿ ಆಯೋಜಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯದ 43ನೇ ಘಟಿಕೋತ್ಸವದಲ್ಲಿ ಅವರು ಮಾತನಾಡಿದರು.
‘ವಿ.ವಿಗಳಿಗೆ ಸರ್ಕಾರ ಸ್ವಾಯತ್ತತೆ ನೀಡಿದೆ. ನಿರಂತರ ಆರ್ಥಿಕ ನೆರವು ನೀಡಲಾಗದು. ಈ ನಡುವೆ ವಿ.ವಿಗಳನ್ನು ಉಳಿಸುವುದು ಕೂಡ ನಮ್ಮ ಜವಾಬ್ದಾರಿ. ವಿ.ವಿಗಳ ವ್ಯವಸ್ಥೆಯನ್ನು ಮತ್ತೆ ಸೃಷ್ಟಿಸುವುದು ಸುಲಭವಲ್ಲ. ಸರ್ಕಾರ ಎಲ್ಲ ವಿಚಾರಗಳನ್ನು ಚರ್ಚಿಸಿ ತೀರ್ಮಾನಿಸಲಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.