ಉಪ್ಪಿನಂಗಡಿ: ನಿರಂತರವಾಗಿ ಸುರಿದ ಮಳೆಯಿಂದಾಗಿ ಅಪಾಯದ ಮಟ್ಟದಲ್ಲಿ ಉಪ್ಪಿನಂಗಡಿಯಲ್ಲಿ ಹರಿಯುತ್ತಿದ್ದ ಕುಮಾರಧಾರಾ ಮತ್ತು ನೇತ್ರಾವತಿ ನದಿಗಳ ನೀರಿನ ಮಟ್ಟ ಗಮನಾರ್ಹವಾಗಿ ಇಳಿಕೆಯಾಗಿದೆ.
ಭಾನುವಾರ ಸಂಜೆ ವೇಳೆಗೆ ದೇವಸ್ಥಾನ ಸ್ನಾನಘಟ್ಟದ 36 ಮೆಟ್ಟಿಲುಗಳ ಪೈಕಿ 14 ಮೆಟ್ಟಿಲು ಕಾಣುತ್ತಿತ್ತು. ನದಿ ನೀರಿನ ಮಟ್ಟ 27.5 ಮೀಟರ್ ಎತ್ತರದಲ್ಲಿ ಇತ್ತು.
ಗ್ರಾಮದ ಕೆಲವಡೆ ಅಪಾಯಕಾರಿ ಮರಗಳ ತೆರವು ಕಾರ್ಯ ನಡೆದಿಲ್ಲ ಎಂದು ಸ್ಥಳೀಯ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ವಿದ್ಯಾಲಕ್ಷ್ಮಿ ಪ್ರಭು ಅವರು ಉಪ್ಪಿನಂಗಡಿಗೆ ಶುಕ್ರವಾರ ಭೇಟಿ ನೀಡಿದ್ದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರಲ್ಲಿ ದೂರಿದ್ದರು. ಈ ಬಗ್ಗೆ ಸ್ಥಳದಲ್ಲಿಯೇ ಅರಣ್ಯ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿದ ಜಿಲ್ಲಾಧಿಕಾರಿ ತೆರವು ಕಾರ್ಯಚರಣೆಯ ವರದಿಯನ್ನು ಶನಿವಾರ ಒಪ್ಪಿಸಬೇಕೆಂದು ನಿರ್ದೇಶನ ನೀಡಿದ್ದರು. ಅದರಂತೆ ಪಂಚಾಯಿತಿ ಆಡಳಿತ ಸೂಚಿಸಿದ್ದ ಮರಗಳನ್ನು ಮತ್ತು ಅವುಗಳ ಗೆಲ್ಲುಗಳನ್ನು ಅರಣ್ಯ ಇಲಾಖೆ ವತಿಯಿಂದ ತೆರವು ಮಾಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.