ADVERTISEMENT

ಉಪ್ಪಿನಂಗಡಿ: ಉಪ್ಪಿನಂಗಡಿ ದೇವಸ್ಥಾನದ ಬಸವ ಸಾವು

​ಪ್ರಜಾವಾಣಿ ವಾರ್ತೆ
Published 19 ಮೇ 2025, 13:03 IST
Last Updated 19 ಮೇ 2025, 13:03 IST
ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಜಾತ್ರೆಯಲ್ಲಿ ಭಾಗವಹಿಸಿದ್ದ ಬಸವ
ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಜಾತ್ರೆಯಲ್ಲಿ ಭಾಗವಹಿಸಿದ್ದ ಬಸವ   

ಉಪ್ಪಿನಂಗಡಿ: ಇಲ್ಲಿನ ಸಹಸ್ರಲಿಂಗೇಶ್ವರ ದೇವಾಲಯದ ಉತ್ಸವಗಳಲ್ಲಿ ಭಾಗವಹಿಸುತ್ತಿದ್ದ, ಲವಲವಿಕೆಯಲ್ಲಿದ್ದ ಬಸವ ಶನಿವಾರ ಸಂಜೆ ಹೃದಯಾಘಾತದಿಂದ ಮೃತಪಟ್ಟಿದೆ.

ದೇವಾಲಯದ ಉತ್ಸವಗಳಲ್ಲಿ ಬೆಳ್ಳಿ ಆಭರಣಗಳನ್ನು ಧರಿಸಿ ದೇವರ ಮುಂದೆ ಸಾಗುತ್ತ ಭಕ್ತರ ಆಕರ್ಷಣೆಗೆ ಒಳಗಾಗಿತ್ತು.

ಬಸವನ ಮೃತ ದೇಹವನ್ನು ಕ್ರೇನ್ ಸಹಾಯದಿಂದ ಸ್ಥಳಾಂತರಿಸಿ ಅಂತ್ಯ ಸಂಸ್ಕಾರ ಮಾಡಲಾಯಿತು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಧಾಕೃಷ್ಣ ನಾಯಕ್ ನೇತೃತ್ವದಲ್ಲಿ ವ್ಯವಸ್ಥಾಪನಾ ಸಮಿತಿ ಸದಸ್ಯರು, ಭಕ್ತರು ಅಂತಿಮ ವಿಧಿಯನ್ನು ನೆರವೇರಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.