ADVERTISEMENT

ಮಂಗಳೂರು | ಮಹಿಳೆಯರಿಗೆ ಕೀಟಲೆ: ವ್ಯಕ್ತಿ ಪೊಲೀಸ್ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2025, 6:25 IST
Last Updated 8 ಸೆಪ್ಟೆಂಬರ್ 2025, 6:25 IST
   

ಉಪ್ಪಿನಂಗಡಿ: ಇಲ್ಲಿನ ಬಸ್ ನಿಲ್ದಾಣ ಪರಿಸರದಲ್ಲಿ ಕೀಟಲೆ ನೀಡುತ್ತಿದ್ದ ಅಪರಿಚಿತ ಯುವಕನೊಬ್ಬನನ್ನು ಸಾರ್ವಜನಿಕರು ಹಿಡಿದು ಕೈಕಾಲು ಕಟ್ಟಿ ನಿಯಂತ್ರಿಸಿದ ಘಟನೆ ನಡೆದಿದೆ.

ಮಹಿಳೆಯರೂ ಸೇರಿದಂತೆ ಹಲವರಿ ಈ ವ್ಯಕ್ತಿ ಕೀಟಲೆ ನೀಡುತ್ತಿದ್ದ. ಆತನನ್ನು ಸ್ಥಳೀಯರು ಹಿಡಿಯಲು ಯತ್ನಿಸಿದಾಗ ಪ್ರತಿರೋಧ ವ್ಯಕ್ತಪಡಿಸಿದ್ದಾನೆ. ಬಳಿಕ ಆತನ ಕೈ ಕಾಲು ಕಟ್ಟಿ ‌ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರು ಆಂಬುಲೆನ್ಸ್ ಮೂಲಕ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಆತ ಏನೂ ಮಾತನಾಡದೆ ಇರುವುದರಿಂದ ‌ವಿವರ ಸಂಗ್ರಹಿಸಲು ಅಸಾಧ್ಯವಾಗಿದೆ ಎಂದು ಉಪ್ಪಿನಂಗಡಿ ಪಿಎಸ್‌ಐ ಅವಿನಾಶ್ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.