ADVERTISEMENT

ಉರ್ವ ಪೊಲೀಸ್ ಠಾಣೆ ಹೆಡ್ ಕಾನ್‌ಸ್ಟೇಬಲ್ ಹೃದಯಾಘಾತದಿಂದ ನಿಧನ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2021, 6:57 IST
Last Updated 2 ಅಕ್ಟೋಬರ್ 2021, 6:57 IST
ಸಿದ್ಧಾರ್ಥ ಜೆ
ಸಿದ್ಧಾರ್ಥ ಜೆ   

ಮಂಗಳೂರು: ನಗರದ ಉರ್ವ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ಸ್ಟೇಬಲ್ ಆಗಿದ್ದ ಸಿದ್ಧಾರ್ಥ ಜೆ (41) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಪುತ್ತೂರು ತಾಲ್ಲೂಕಿನ ಈಶ್ವರಮಂಗಲದ ಸಿದ್ಧಾರ್ಥ ‌ನಗರದ ಪೊಲೀಸ್ ವಸತಿ ಗೃಹದಲ್ಲಿ ವಾಸಿಸುತ್ತಿದ್ದರು.

ಶುಕ್ರವಾರ ರಾತ್ರಿ ಕರ್ತವ್ಯ ದಲ್ಲಿರುವಾಗ ಅವರಿಗೆ ಅನಾರೋಗ್ಯ ಕಾಡಿದ್ದು, ಮನೆಗೆ ತೆರಳಿದ್ದಾರೆ. ನಂತರ ಬೆಳಗಿನ ಜಾವ 3 ಗಂಟೆ‌ ಸುಮಾರಿಗೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಗೆ‌ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ. ಅವರಿಗೆ ಪತ್ನಿ, ಪುತ್ರ ಇದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.