ADVERTISEMENT

ಇಲಾಖಾ ಕಚೇರಿ ಆರಂಭಕ್ಕೆ ಸೂಚನೆ

ಉಳ್ಳಾಲ ತಾಲೂಕು ಸಮನ್ವಯ ಸಮಿತಿ ಸಭೆಯಲ್ಲಿ ಯು.ಟಿ.ಖಾದರ್

​ಪ್ರಜಾವಾಣಿ ವಾರ್ತೆ
Published 3 ಜುಲೈ 2022, 2:45 IST
Last Updated 3 ಜುಲೈ 2022, 2:45 IST

ಮುಡಿಪು: ಉಳ್ಳಾಲ ತಾಲ್ಲೂಕು ಕೇಂದ್ರದಲ್ಲಿ ಎಲ್ಲ ಇಲಾಖೆಗಳ ಕಚೇರಿಗಳನ್ನು ತೆರೆಯಬೇಕು ಎಂದು ವಿಧಾನಸಭೆಯಲ್ಲಿನ ವಿರೋಧ ಪಕ್ಷದ ಉಪನಾಯಕ ಯು.ಟಿ.ಖಾದರ್ ಅಧಿಕಾರಿಗಳಿಗೆ ಸೂಚಿಸಿದರು.

ಅಸೈಗೋಳಿಯಲ್ಲಿ ಜರುಗಿದ ಉಳ್ಳಾಲ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ವಿವಿಧ ಇಲಾಖೆಗಳ ಹಾಗೂ ಜನಪ್ರತಿನಿಧಿಗಳ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಂದಾಯ ಇಲಾಖೆಯ ‘ಭೂಮಿ’ಗೆ ಸಂಬಂಧಪಟ್ಟ ದಾಖಲೆಗಳು ವರ್ಗಾವಣೆಗೆ ತಹಶೀಲ್ದಾರರಿಗೆ ಸೂಚಿಸಲಾಯಿತು. ಇನ್ನೂ ನಡೆಯದ ಹುದ್ದೆಗಳ ಮಂಜೂರಾತಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿ, ಪಡಿತರ ಚೀಟಿ ಹಾಗೂ ಶಾಲೆ, ಅಂಗನವಾಡಿ, ನಿವೇಶನ ಮುಂತಾದ ಉದ್ದೇಶಗಳಿಗೆ ಜಮೀನು ಕಾದಿರಿಸುವ ಕುರಿತು ಚರ್ಚೆ ನಡೆಯಿತು.

ADVERTISEMENT

ಶೀಘ್ರವೇ ತಾಲ್ಲೂಕು ಕಚೇರಿಗಳಿಗೆ ಜಮೀನು ಗುರುತಿಸಿ ಕಾದಿರಿಸುವಂತೆ ತಹಶೀಲ್ದಾರ್ ಹಾಗೂ ಇಲಾಖಾ ಅಧಿಕಾರಿಗಳಿಗೆ ತಿಳಿಸಿದರು. ನೋಡಲ್ ಅಧಿಕಾರಿ ನೇಮಕಕ್ಕೆ ಸಭೆ ಸಲಹೆ ನೀಡಿತು. ವಿವಿಧ ಇಲಾಖೆಗಳ ಅಧಿಕಾರಿಗಳು ಮಾಹಿತಿ ನೀಡಿದರು.

ಮುಖಂಡರಾದ ಚಂದ್ರಹಾಸ ಕರ್ಕೇರ, ಅಬ್ದುಲ್‌ ಜಬ್ಬಾರ್‌, ಸುರೇಖಾ, ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.

ತಾಲ್ಲೂಕು ಪಂಚಾಯಿತಿ ಪ್ರಭಾರ ಕಾರ್ಯ ನಿರ್ವಾಹಕ ಅಧಿಕಾರಿ ವಿ.ನಾಗರಾಜ್ ಸ್ವಾಗತಿಸಿದರು. ತಹಶೀಲ್ದಾರ್ ಗುರುಪ್ರಸಾದ್ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.