ADVERTISEMENT

ಆಸ್ಪತ್ರೆಗಳಲ್ಲಿ ಇಂದು ಕೋವಿಡ್ ಲಸಿಕೆ ಲಭ್ಯ

​ಪ್ರಜಾವಾಣಿ ವಾರ್ತೆ
Published 8 ಜೂನ್ 2021, 14:54 IST
Last Updated 8 ಜೂನ್ 2021, 14:54 IST
ಚಿತ್ರ: ಸಾಂದರ್ಭಿಕ
ಚಿತ್ರ: ಸಾಂದರ್ಭಿಕ   

ಮಂಗಳೂರು: ಕೋವಿಡ್‌ ಪ್ರತಿರೋಧದ ಕೋವಿಶೀಲ್ಡ್ ಲಸಿಕೆ ಜೂನ್ 9ರಂದು ಎಲ್ಲ ತಾಲ್ಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಭ್ಯವಿದ್ದು, ಅರ್ಹ ಫಲಾನುಭವಿಗಳಿಗೆ ಚುಚ್ಚುಮದ್ದು ನೀಡಲಾಗುತ್ತದೆ.

ಬಂಟ್ವಾಳ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆನ್‌ಲೈನ್‌ ರಿಜಿಸ್ಟ್ರೇಷನ್‌ ಮಾಡಿ, ಆನ್‌ಲೈನ್‌ ಅಪಾಯಿಂಟ್‌ಮೆಂಟ್‌ ಶೆಡ್ಯೂಲ್‌ ಮಾಡಿಕೊಂಡವರಿಗೆ ಮಾತ್ರ ಲಸಿಕೆನೀಡಲಾಗುವುದು. ಮಂಗಳೂರಿನ 10 ನಗರ ಆರೋಗ್ಯ ಕೇಂದ್ರ, ಉಳ್ಳಾಲ ನಗರ ಸಮುದಾಯ ಆರೋಗ್ಯ ಕೇಂದ್ರ, ಬಂಟ್ವಾಳ ಮತ್ತು ಪುತ್ತೂರು ನಗರ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆಯನ್ನು ಪಡೆಯಲು ಆನ್‌ಲೈನ್‌ ಮೂಲಕ ನೋಂದಣಿ ಮಾಡಿಕೊಂಡವರು ಅಪಾಯಿಂಟ್‌ಮೆಂಟ್‌ ಶೆಡ್ಯೂಲ್‌ ಮಾಡಿಕೊಂಡು ಲಸಿಕಾ ಶಿಬಿರಕ್ಕೆ ಬರಬೇಕು.


ಈಗಾಗಲೇ ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ಪಡೆದ ಫಲಾನುಭವಿಗಳು 2ನೇ ಡೋಸ್ ಲಸಿಕೆಯನ್ನು ಪಡೆಯಲು 84 ದಿನಗಳನ್ನು ಪೂರೈಸಿದವರು ತಮ್ಮ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರ/ ಸಮುದಾಯ ಆರೋಗ್ಯ ಕೇಂದ್ರ/ ನಗರ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆಯ ಲಭ್ಯತೆ ಇರುವಾಗ ಆದ್ಯತೆಯ ಮೇರೆಗೆ ಪಡೆಯಬಹುದು.‌

ADVERTISEMENT

ಕೋವ್ಯಾಕ್ಸಿನ್‌ ಲಸಿಕೆ: ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಹಾಗೂ ಎಲ್ಲಾ ತಾಲ್ಲೂಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಕೋವ್ಯಾಕ್ಸಿನ್ 2ನೇ ಡೋಸ್ ಲಭ್ಯವಿದ್ದು, ಎರಡನೇ ಡೋಸ್ ಲಸಿಕೆಯನ್ನು ಪಡೆಯಲು ಬಾಕಿ ಇರುವ ಎಲ್ಲಾ ಫಲಾನುಭವಿಗಳು ಜಿಲ್ಲಾಸ್ಪತ್ರೆ/ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಲಸಿಕೆಯನ್ನು ಪಡೆಯಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.