ADVERTISEMENT

ವಳಲಂಬೆ: ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2025, 7:26 IST
Last Updated 18 ನವೆಂಬರ್ 2025, 7:26 IST
ಪಂಜ ಹೋಬಳಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಂಶೋಧಕ ಪುರುಷೋತ್ತಮ ಕೆ.ವಿ.ಕರಂಗಲ್ಲು ಉದ್ಘಾಟಿಸಿದರು
ಪಂಜ ಹೋಬಳಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಂಶೋಧಕ ಪುರುಷೋತ್ತಮ ಕೆ.ವಿ.ಕರಂಗಲ್ಲು ಉದ್ಘಾಟಿಸಿದರು   

ಸುಬ್ರಹ್ಮಣ್ಯ: ಸುಳ್ಯ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪಂಜ ಹೋಬಳಿ ಘಟಕದ ಆಶ್ರಯದಲ್ಲಿ ಹೋಬಳಿ ಕನ್ನಡ ಸಾಹಿತ್ಯ ಸಮ್ಮೇಳನ ಹಿರಿಯ ಸಾಹಿತಿ, ಸಂಶೋಧಕ ಎ.ಕೆ.ಹಿಮಕರ ಅವರ ಅಧ್ಯಕ್ಷತೆಯಲ್ಲಿ ಭಾನುವಾರ ವಳಲಂಬೆ ಶಂಖಪಾಲ ಸುಬ್ರಹ್ಮಣ್ಯ ದೇವಾಲಯದ ವಠಾರದಲ್ಲಿ ನಡೆಯಿತು.

ಸಮ್ಮೇಳನವನ್ನು ಸಾಹಿತಿ, ಸಂಶೋಧಕ ಪುರುಷೋತ್ತಮ ಕೆ.ವಿ.ಕರಂಗಲ್ಲು ಉದ್ಘಾಟಿಸಿದರು. ಬಳಿಕ ಕನ್ನಡ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಸಮ್ಮೇಳನದ ಮೆರವಣಿಗೆಗೆ ಬೆಳ್ಯಪ್ಪ ಗೌಡ ಕಡ್ತಲ್ ಕಜೆ ಚಾಲನೆ ನೀಡಿದರು. 

ವೇದಿಕೆಯಲ್ಲಿ ಶಾಸಕಿ ಕು.ಭಾಗಿರಥಿ ಮುರುಳ್ಯ, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಕಸಾಪ ಜಿಲ್ಲಾಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್, ಗುತ್ತಿಗಾರು ಗ್ರಾ.ಪಂ. ಅಧ್ಯಕ್ಷೆ ಸುಮಿತ್ರ ಮೂಕಮಲೆ, ಸುಳ್ಯ ಕಸಾಪ ಅಧ್ಯಕ್ಷ ಚಂದ್ರಶೇಖರ ಪೇರಾಲು, ವಳಲಂಬೆ ಶಂಖಪಾಲ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ, ಪಂಜ ಹೋಬಳಿ ಕಸಾಪ ಘಟಕ ಅಧ್ಯಕ್ಷ ಬಾಬು ಗೌಡ ಅಚ್ರಪ್ಪಾಡಿ, ಸುಳ್ಯ ಹೋಬಳಿ ಕಸಾಪ ಅಧ್ಯಕ್ಷೆ ಚಂದ್ರಾವತಿ ಬಡ್ಡಡ್ಕ, ಕಸಾಪ ಜಿಲ್ಲಾ ಸಮಿತಿ ನಿರ್ದೇಶಕ ರಾಮಚಂದ್ರ ಪಲ್ಲತಡ್ಕ, ಸಮ್ಮೇಳನದ ಸಂಘಟನಾ ಸಮಿತಿ ಕಾರ್ಯದರ್ಶಿ ಕೇಶವ ಹೊಸೋಳಿಕೆ ಉಪಸ್ಥಿತರಿದ್ದರು.

ADVERTISEMENT

ಗುತ್ತಿಗಾರು ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ನಾಡಗೀತೆ ಹಾಗೂ ರೈತ ಗೀತೆ ಹಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.