ಮೂಡುಬಿದಿರೆ (ದಕ್ಷಿಣ ಕನ್ನಡ): ಮೂಡುಬಿದಿರೆಯ ವರ್ಧಮಾನ ಪ್ರಶಸ್ತಿ ಪೀಠದ 2024ರ ಸಾಲಿನ ವರ್ಧಮಾನ ಸಾಹಿತ್ಯ ಪ್ರಶಸ್ತಿಗೆ ಸಾಹಿತಿ ಉಡುಪಿಯ ಪ್ರೇಮಶೇಖರ್ ಹಾಗೂ ವರ್ಧಮಾನ ಉದಯೋನ್ಮುಖ ಸಾಹಿತ್ಯ ಪ್ರಶಸ್ತಿಗೆ ವಿಮರ್ಶಕ ಹಾವೇರಿಯ ವಿಕಾಸ ಹೊಸಮನಿ ಅವರನ್ನು ಆಯ್ಕೆ ಮಾಡಲಾಗಿದೆ.
ವರ್ಧಮಾನ ಸಾಹಿತ್ಯ ಪ್ರಶಸ್ತಿಯು ₹25 ಸಾವಿರ ಗೌರವ ಸಂಭಾವನೆ, ವರ್ಧಮಾನ ಉದಯೋನ್ಮುಖ ಪ್ರಶಸ್ತಿಯು ₹15ಸಾವಿರ ಗೌರವ ಸಂಭಾವನೆ ಒಳಗೊಂಡಿದೆ.
ಮೂಡುಬಿದಿರೆಯಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ನಡೆಯುವ ದಸರಾ ಸಾಹಿತ್ಯೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪೀಠದ ಪ್ರಧಾನ ನಿರ್ದೇಶಕ ನಾ.ಮೊಗಸಾಲೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.