ADVERTISEMENT

ವಿಬಿ ಜಿ ರಾಮ್ ಜಿ ಕಾಯ್ದೆ ಜನಜಾಗೃತಿ ಜಾಥಾ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2026, 2:55 IST
Last Updated 19 ಫೆಬ್ರುವರಿ 2026, 2:55 IST
ವಿಬಿ ಜಿ ರಾಮ್ ಜಿ ಕಾಯ್ದೆಯ ಕುರಿತು ಜನಜಾಗೃತಿ ಮೂಡಿಸಲು ಮಂಗಳೂರಿನಲ್ಲಿ ಬಿಜೆಪಿ ನೇತೃತ್ವದಲ್ಲಿ ಬುಧವಾರ ಜಾಥಾ ನಡೆಯಿತು: ಪ್ರಜಾವಾಣಿ ಚಿತ್ರ
ವಿಬಿ ಜಿ ರಾಮ್ ಜಿ ಕಾಯ್ದೆಯ ಕುರಿತು ಜನಜಾಗೃತಿ ಮೂಡಿಸಲು ಮಂಗಳೂರಿನಲ್ಲಿ ಬಿಜೆಪಿ ನೇತೃತ್ವದಲ್ಲಿ ಬುಧವಾರ ಜಾಥಾ ನಡೆಯಿತು: ಪ್ರಜಾವಾಣಿ ಚಿತ್ರ   

ಮಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ ಜಿ ರಾಮ್ ಜಿ ಕಾಯ್ದೆಯ ಬಗ್ಗೆ ಜನಜಾಗೃತಿ ಮೂಡಿಸಲು ಬಿಜೆಪಿಯ ನಗರ ದಕ್ಷಿಣ ಮಂಡಲದ ನೇತೃತ್ವದಲ್ಲಿ ಪಿವಿಎಸ್ ವೃತ್ತದ ಬಳಿ ಇರುವ ಪಕ್ಷದ ಕಚೇರಿಯಿಂದ ಪಾಲಿಕೆ ಕಚೇರಿವರೆಗೆ ಕಾಲ್ನಡಿಗೆ ಜಾಥಾ ಬುಧವಾರ ನಡೆಯಿತು.

ಜಾಥಾದಲ್ಲಿ ಭಾಗವಹಿಸಿದ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ, ‘ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಒಂದೇ ಒಂದು ರೂಪಾಯಿ ಭ್ರಷ್ಟಾಚಾರಕ್ಕೂ ಆಸ್ಪದವಿಲ್ಲ. ಪಾರದರ್ಶಕ ಆಡಳಿತದ ಪ್ರತಿಬಿಂಬ ವಿಬಿ ಜಿ ರಾಮ್ ಜಿ. ಕಾಯ್ದೆ’ ಎಂದರು.

ಶಾಸಕ ವೇದವ್ಯಾಸ ಕಾಮತ್, ‘ವಿಬಿ-ಜಿ ರಾಮ್‌ ಜಿ ಕಾಯ್ದೆಯಡಿ ವಾರ್ಷಿಕ ದುಡಿಮೆಯ ದಿನಗಳನ್ನು 100 ರಿಂದ 125 ಕ್ಕೆ ಹೆಚ್ಚಿಸಲಾಗಿದೆ. ಆದರೂ ಇದನ್ನು ಕಾಂಗ್ರೆಸ್ಸಿಗರು ವಿರೋಧಿಸುತ್ತಿದ್ದಾರೆ. ಮನರೇಗಾ ಹೆಸರಿನಲ್ಲಿ ಸಾವಿರಾರು ಕೋಟಿ ಭ್ರಷ್ಟಾಚಾರ ನಡೆಸಲಾಗಿದೆ. ಭ್ರಷ್ಟಾಚಾರಕ್ಕೆ ಈಗ ಅವಕಾಶವಿಲ್ಲದಿರುವುದೇ ಕಾಂಗ್ರೆಸ್ಸಿಗರ ಅಸಹನೆಗೆ ಕಾರಣ’ ಎಂದು ಪ್ರಶ್ನಿಸಿದರು.

ADVERTISEMENT

ಪಕ್ಷದ ನಗರ ದಕ್ಷಿಣ ಮಂಡಲದ ಅಧ್ಯಕ್ಷ ರಮೇಶ್ ಕಂಡೆಟ್ಟು,  ಪಕ್ಷದ ಮುಖಂಡರಾದ ನಂದನ್ ಮಲ್ಯ, ರಮೇಶ್ ಹೆಗ್ಡೆ, ಲಲ್ಲೇಶ್ ಕುಮಾರ್, ತಿಲಕರಾಜ್ ಕೃಷ್ಣಾಪುರ, ಪೂರ್ಣಿಮಾ ಎಂ., ಸಂಜಯ್ ಪ್ರಭು, ಶಾನವಾಜ್, ಜಗನ್ನಾಥ್, ಸುಧೀರ್ ಶೆಟ್ಟಿ ಕಣ್ಣೂರು,ವಸಂತ್ ಜೆ.ಪೂಜಾರಿ, ರವಿಶಂಕರ್ ಮಿಜಾರ್, ನಿತಿನ್ ಕುಮಾರ್, ವಿಜಯ್ ಕುಮಾರ್ ಶೆಟ್ಟಿ, ಅಶ್ವಿತ್ ಕೊಟ್ಟಾರಿ, ರಾಜಗೋಪಾಲ್ ರೈ ಮೊದಲಾದವರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.