ADVERTISEMENT

ಅಬ್ಬಕ್ಕ ಪ್ರಶಸ್ತಿಗೆ ಸಾಯಿಗೀತಾ, ರಾಜಶ್ರೀ ಆಯ್ಕೆ

​ಪ್ರಜಾವಾಣಿ ವಾರ್ತೆ
Published 31 ಜನವರಿ 2026, 8:36 IST
Last Updated 31 ಜನವರಿ 2026, 8:36 IST
ಪ್ರೊ. ಸಾಯಿಗೀತಾ
ಪ್ರೊ. ಸಾಯಿಗೀತಾ   

ಮಂಗಳೂರು: ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ನೀಡುವ 2025– 26ನೇ ಸಾಲಿನ ವೀರಾರಾಣಿ ಅಬ್ಬಕ್ಕ ಪ್ರಶಸ್ತಿಗೆ ದೇರಳಕಟ್ಟೆ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಡಾ. ಕೆ.ಆರ್. ಶೆಟ್ಟಿ ತುಳು ಅಧ್ಯಯನ ಕೇಂದ್ರದ ಮುಖ್ಯಸ್ಥೆ ಪ್ರೊ. ಸಾಯಿಗೀತಾ (ಸಾಹಿತ್ಯ) ಹಾಗೂ ನಾಟ್ಯನಿಕೇತನ ನೃತ್ಯ ಸಂಸ್ಥೆಯ ಪ್ರಾಂಶುಪಾಲೆ ವಿದುಷಿ ರಾಜಶ್ರೀ ಉಳ್ಳಾಲ್ (ಕಲೆ) ಆಯ್ಕೆಯಾಗಿದ್ದಾರೆ ಎಂದು ಸಮಿತಿಯ ಪ್ರಮುಖರಾದ ಜಯರಾಮ ಶೆಟ್ಟಿ ತಿಳಿಸಿದರು. 

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಪ್ರಶಸ್ತಿಯು ₹25 ಸಾವಿರ ನಗದು, ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಫೆ.14ರಂದು ತೊಕ್ಕೊಟ್ಟಿನಲ್ಲಿ ನಡೆಯುವ ಅಬ್ಬಕ್ಕ ಉತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದರು. 

ಸಮಿತಿಯ ಅಧ್ಯಕ್ಷ ದಿನಕರ ಉಳ್ಳಾಲ್, ಪ್ರಮುಖರಾದ ಧನಲಕ್ಷ್ಮಿ ಗಟ್ಟಿ, ಸದಾನಂದ ಬಂಗೇರ, ಆನಂದ ಅಸೈಗೋಳಿ, ರತ್ನಾವತಿ ಬೈಕಾಡಿ, ಅಲಿಯಬ್ಬ ಇದ್ದರು.

ADVERTISEMENT
ರಾಜಶ್ರೀ ಉಳ್ಳಾಲ್ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.