ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಅ.24ರಂದು ಧರ್ಮಸ್ಥಳದಲ್ಲಿ ನಡೆಯಲಿದೆ.
ಭಗವಾನ್ ಚಂದ್ರನಾಥಸ್ವಾಮಿ ಬಸದಿ, ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನಡೆಯಲಿವೆ. ಊರಿನ ನಾಗರಿಕರು, ಭಕ್ತರು ಹಾಗೂ ಅಭಿಮಾನಿಗಳು ಹೆಗ್ಗಡೆ ಅವರಿಗೆ ಗೌರವಾರ್ಪಣೆ ಮಾಡುವರು.
ಸಂಜೆ 4ಕ್ಕೆ ನಡೆಯುವ ಸಮಾರಂಭದಲ್ಲಿ ತುಮಕೂರಿನ ಸಿದ್ಧಗಂಗಾ ಮಠದ ಸಿದ್ಧಲಿಂಗಸ್ವಾಮೀಜಿ ಆಶೀರ್ವಚನ ನೀಡುವರು. ಶಾಸಕರಾದ ಹರೀಶ್ ಪೂಂಜ, ಕೆ.ಪ್ರತಾಪಸಿಂಹ ನಾಯಕ್, ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್ ಕುಮಾರ್ ಭಾಗವಹಿಸುವರು. ಹಿರಿಯ ನೌಕರರ ಸನ್ಮಾನ, ಹೆಗ್ಗಡೆ ಅವರು ಹೊಸ ಯೋಜನೆಗಳನ್ನು ಪ್ರಕಟಿಸುವರು.
ಬಸದಿ, ದೇವಸ್ಥಾನ, ಬೀಡು (ಹೆಗ್ಗಡೆ ಅವರ ನಿವಾಸ) ಅನ್ನಪೂರ್ಣ ಹಾಗೂ ವಸತಿಛತ್ರಗಳನ್ನು ಅಲಂಕರಿಸಲಾಗಿದೆ.
ಧರ್ಮಸ್ಥಳದ 21ನೇ ಧರ್ಮಾಧಿಕಾರಿಯಾಗಿ ನೆಲ್ಯಾಡಿ ಬೀಡಿನಲ್ಲಿ ವೀರೇಂದ್ರ ಕುಮಾರ್ ಅವರಿಗೆ 1698ರ ಅ.24ರಂದು ಹೆಗ್ಗಡೆಯಾಗಿ ಪಟ್ಟಾಭಿಷೇಕವಾಗಿತ್ತು.