ADVERTISEMENT

ಆಸ್ಕರ್‌ ಆರೋಗ್ಯ ವಿಚಾರಿಸಿದವೀರೇಂದ್ರ ಹೆಗ್ಗಡೆ, ಅದಮಾರು ಶ್ರೀ

​ಪ್ರಜಾವಾಣಿ ವಾರ್ತೆ
Published 25 ಜುಲೈ 2021, 4:29 IST
Last Updated 25 ಜುಲೈ 2021, 4:29 IST
ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಶನಿವಾರ ಯೇನೆಪೋಯ ಆಸ್ಪತ್ರೆಗೆ ಭೇಟಿ ನೀಡಿದರು.
ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಶನಿವಾರ ಯೇನೆಪೋಯ ಆಸ್ಪತ್ರೆಗೆ ಭೇಟಿ ನೀಡಿದರು.   

ಮಂಗಳೂರು: ನಗರದ ಯೇನೆಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ರಾಜಕಾರಣಿ, ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್‌ ಅವರನ್ನು ಶನಿವಾರ ಭೇಟಿ ಮಾಡಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಆಸ್ಕರ್ ಫರ್ನಾಂಡಿಸ್‌ ಅವರ ಯೋಗಕ್ಷೇಮ ವಿಚಾರಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ವೀರೇಂದ್ರ ಹೆಗ್ಗಡೆ ಅವರು, ‘ಉಡುಪಿಯಲ್ಲಿ ಹುಟ್ಟಿ ಬೆಳೆದ ಆಸ್ಕರ್ ಫರ್ನಾಂಡಿಸ್‌ ಅವರು ನೆಹರೂ ಕುಟುಂಬಕ್ಕೆ ತೀರಾ ಆತ್ಮೀಯರಾಗಿದ್ದರು. ಬಹುಬೇಗನೆ ರಾಜ್ಯ, ರಾಷ್ಟ್ರಕಾರಣದಲ್ಲಿ ಅವರು ಮಿಂಚಿದರು. ಅವರ ಸೇವೆ ಇನ್ನೂ ನಾಡಿನ ಜನತೆಗೆ ಬೇಕಾಗಿದೆ. ಹಾಗಾಗಿ ಅವರು ಶೀಘ್ರ ಗುಣಮುಖರಾಗಿ ಬರಲಿ’ ಎಂದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಬಿ.ರಮಾನಾಥ ರೈ, ವಿನಯ ಕುಮಾರ್ ಸೊರಕೆ, ಪಕ್ಷದ ಮುಖಂಡರಾದ ಎಂ.ಎ.ಗಫೂರ್, ಶಶಿಧರ ಹೆಗ್ಡೆ ಇದ್ದರು.

ADVERTISEMENT

ಅದಮಾರು ಶ್ರೀ ಭೇಟಿ:ಪರ್ಯಾಯ ಅದಮಾರು ಮಠದ ಹಿರಿಯ ಯತಿಗಳಾದ ವಿಶ್ವಪ್ರಿಯ ತೀರ್ಥರು ಶನಿವಾರ ಆಸ್ಪತ್ರೆಗೆ ಭೇಟಿ ನೀಡಿದರು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಸ್ಕರ್ ಫರ್ನಾಂಡಿಸ್‌ ಅವರ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಪ್ರಾರ್ಥಿಸಿದರು.

ಆರೋಗ್ಯ ಸ್ಥಿರ: ಆಸ್ಕರ್‌ ಫರ್ನಾಂಡಿಸ್‌ ಅವರ ಆರೋಗ್ಯ ಸ್ಥಿತಿ ನಾಜೂಕಾಗಿದ್ದರೂ ಸ್ಥಿರವಾಗಿದೆ. ವೈದ್ಯರ ತಂಡ ಅವರ ಆರೋಗ್ಯದ ಬಗ್ಗೆ ನಿರಂತರ ನಿಗಾ ವಹಿಸಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.