ADVERTISEMENT

ಮಂಗಳೂರು | ಪ್ರಚೋದನಕಾರಿ ಪೋಸ್ಟ್: VHP ಮುಖಂಡ ಶರಣ್‌ ಪಂಪ್‌ವೆಲ್ ವಿರುದ್ಧ ಪ್ರಕರಣ

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2025, 8:59 IST
Last Updated 31 ಅಕ್ಟೋಬರ್ 2025, 8:59 IST
   

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಶೇರ್ ಮಾಡಿರುವ ಆರೋಪದ ಮೇಲೆ ವಿಶ್ವ ಹಿಂದೂ ಪರಿಷತ್‌ನ ಶರಣ್ ಪಂಪ್‌ವೆಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಶೇರ್ ಮಾಡಿರುವ ಪೋಸ್ಟ್ ಅನ್ನು ಅವರು ತೆಗೆದು ಹಾಕಿದ್ದಾರೆ. ಅವರಿಗೆ‌ ನೋಟಿಸ್ ಜಾರಿಗೊಳಿಸಲಾಗಿದ್ದು, ಸೋಮವಾರ ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ ಎಂದು ಅವರು ಮಾಹಿತಿ‌ ನೀಡಿದ್ದಾರೆ.

ಸಮಾಜದಲ್ಲಿ ದ್ವೇಷ ಭಾವನೆ ಮೂಡಿಸಬಹುದಾದ ಭಾಷಣದ ವಿಡಿಯೊ ತುಣುಕನ್ನು ಶರಣ್ ಫೇಸ್‌ಬುಕ್‌ನಲ್ಲಿ ಶೇರ್ ಮಾಡಿದ್ದರು‌ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ADVERTISEMENT

ಕದ್ರಿ ಠಾಣೆಯ ಎದುರು ವಿಎಚ್‌ಪಿ ಹಾಗೂ ಬಜರಂಗದಳದ ಕಾರ್ಯಕರ್ತರು ಜಮಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.