ADVERTISEMENT

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ʼವಿದ್ಯಾ ಪ್ರವೇಶಂʼ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 2 ಜೂನ್ 2025, 13:00 IST
Last Updated 2 ಜೂನ್ 2025, 13:00 IST
<div class="paragraphs"><p>ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ವಿದ್ಯಾ ಪ್ರವೇಶಂ ಕಾರ್ಯಕ್ರಮವನ್ನು ಸಂಸ್ಥೆಯ ಅಧ್ಯಕ್ಷ ಕುಶಾಲಪ್ಪ ಗೌಡ ಉದ್ಘಾಟಿಸಿದರು</p></div>

ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ವಿದ್ಯಾ ಪ್ರವೇಶಂ ಕಾರ್ಯಕ್ರಮವನ್ನು ಸಂಸ್ಥೆಯ ಅಧ್ಯಕ್ಷ ಕುಶಾಲಪ್ಪ ಗೌಡ ಉದ್ಘಾಟಿಸಿದರು

   

ಬೆಳ್ತಂಗಡಿ: ವಿದ್ಯಾಭ್ಯಾಸದೊಂದಿಗೆ ಶ್ರಮ, ಶಿಸ್ತಿಗೆ ಆದ್ಯತೆ ನೀಡಿ ಉನ್ನತ ವ್ಯಕ್ತಿತ್ವ ಗಳಿಸುವುದೇ ವಿದ್ಯಾರ್ಥಿಗಳ ಗುರಿಯಾಗಬೇಕು ಎಂದು ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕುಶಾಲಪ್ಪ ಗೌಡ ಹೇಳಿದರು.

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ADVERTISEMENT

ವಿದ್ಯಾರ್ಥಿಗಳು ಅನಗತ್ಯ ವ್ಯಾಮೋಹಗಳಿಗೆ, ದುಶ್ಚಟಗಳಿಗೆ ಒಳಗಾಗದೆ ಮಾದರಿಯಾಗಿ ಉನ್ನತ ಸ್ಥಾನವನ್ನು ಗಳಿಸಿಕೊಳ್ಳಬೇಕು ಎಂದರು.

ವಾಣಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಗಣೇಶ್ ಗೌಡ, ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸುರೇಂದ್ರ ಭಾಗವಹಿಸಿದ್ದರು.

ಪ್ರಾಂಶುಪಾಲ ವಿಷ್ಣುಪ್ರಕಾಶ್ ಎಂ. ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸೌಮ್ಯಾ ಬಿ.ವಂದಿಸಿದರು. ಅನುರಾಧಾ ಕೆ. ರಾವ್ ಕಾರ್ಯಕ್ರಮ ನಿರೂಪಿಸಿದರು.

ಉಪನ್ಯಾಸಕರಾದ ರಾಧಿಕಾ, ವಿನಯ ಭಿಡೆ, ಅನುಷಾ, ಹರ್ಷಿತ್, ಸುಧೀರ್ ಕೆ.ಎನ್., ಶಂಕರ್ ರಾವ್ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.