ಮಂಗಳೂರು: ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಾಧಿಪತಿ ವಿನಯ್ ಹೆಗ್ಡೆ (83) ಹೃದಯಾಘಾತದಿಂದ ಗುರುವಾರ ನಿಧನರಾದರು. ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ.
ಮೃತದೇಹದ ಸಾರ್ವಜನಿಕ ದರ್ಶನಕ್ಕೆ ಇಲ್ಲಿನ ಶಿವಭಾಗ್‌ನಲ್ಲಿರುವ ಅವರ ನಿವಾಸದಲ್ಲಿ ಬೆಳಿಗ್ಗೆ 8.30ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಹಾಗೂ ದೇರಳಕಟ್ಟೆಯ ನಿಟ್ಟೆ ಕ್ಯಾಂಪಸ್‌ನಲ್ಲಿ ಸಂಜೆ 4.30ರಿಂದ 6 ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸುಪ್ರೀಂ ಕೋರ್ಟ್ ಮಾಜಿ ನ್ಯಾಯಮೂರ್ತಿ ದಿ. ಕೆ.ಎಸ್. ಹೆಗ್ಡೆ ಅವರ ಎರಡನೇ ಪುತ್ರ ವಿನಯ್ ಹೆಗ್ಡೆ ಅವರು ದಕ್ಷಿಣ ಕನ್ನಡ ಜಿಲ್ಲೆಯ ಶೈಕ್ಷಣಿಕ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ದೊಡ್ಡದು. ಅವರು ಸ್ಥಾಪಿಸಿರುವ ನಿಟ್ಟೆ ಶಿಕ್ಷಣ ಸಂಸ್ಥೆಯಲ್ಲಿ ವೈದ್ಯಕೀಯ, ಎಂಜಿನಿಯರಿಂಗ್ ಹಾಗೂ ಇನ್ನಿತರ ಕೋರ್ಸ್ ಗಳು ಇವೆ. ಇತ್ತೀಚೆಗೆ ನಿಟ್ಟೆ ಶಿಕ್ಷಣ ಸಂಸ್ಥೆಗೆ ಪರಿಗಣಿತ ವಿವಿ ಮಾನ್ಯತೆ ದೊರೆತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.